ರಾಜ್ಯ ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬದ ಕಲರವ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ವಿಶ್ವ ಕುಂದಾಪುರ ಕನ್ನಡ ಹಬ್ಬ ಸಂಭ್ರಮದಿಂದ ನಡೆಯಿತು. ಟೀಮ್ ಕುಂದಾಪುರಿಯನ್ಸ್ ವತಿಯಿಂದ ಮಾತಿನ್ ಹಬ್ಬ ಕಾರ್ಯಕ್ರಮ ಆಯೋಜಿಸಲಾಯಿತು. ಬದುಕು ಕಟ್ಟಕೊಳ್ಳುವ ಸಲುವಾಗಿ ಊರು ಬಿಟ್ಟು ಬೆಂಗಳೂರಿನಲ್ಲಿ ನೆಲೆಯಾದ ಕುಂದಾಪುರ ಭಾಗದವರೇ ಸೇರಿ ಕಟ್ಟಿದ ತಂಡವೇ ಟೀಂ ಕುಂದಾಪುರಿಯನ್ಸ್. ಈಗಾಗಲೇ ಹತ್ತು-ಹಲವು ಸಾಮಾಜಿಕ ಕಾರ್ಯಗಳ ಮೂಲಕ ಮಹಾನಗರಿಯಲ್ಲಿ ಮನೆಮಾತಾದ ತಂಡ, ಇಂದು ಕುಂದಾಪುರದ ಹಬ್ಬದ ಮೂಲಕ ಮತ್ತೊಮ್ಮೆ ತನ್ನ ಸಾಧನೆಯನ್ನ ತೋರಿಸಿಕೊಟ್ಟಿದೆ. ಕಾರ್ಯಕ್ರಮದಲ್ಲಿ ಕುಂದಾಪುರ ಕನ್ನಡ ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್, […]

ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಪ್ರಾಂಶುಪಾಲರಾಗಿರುವ  ಗಣೇಶ‌ ಮೊಗವೀರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಲಾವಿದ ರಾಮ್ ಶೆಟ್ಟಿ ಅತ್ತಿಕಾರ್  ಕುಂದಾಪ್ರ ಕನ್ನಡ ಆಚರಣೆಯ ಮಹತ್ವದ ಕುರಿತು ಮಾತನಾಡಿದರು. ಪ್ರಾಂಶುಪಾಲ ಗಣೇಶ್ ಮೊಗವೀರ ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆ ಅಗತ್ಯತೆ ಹಾಗೂ ಕುಂದಕನ್ನಡದ ಸಾಧಕರ ಕುರಿತು ಮಾಹಿತಿ ನೀಡಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಂಜು ಕಾಳವಾರ, […]