ಕುಂದಾಪುರ ಕನ್ನಡ ಜನಮಾನಸದಲ್ಲಿ ಬೆಸೆತಿರುವ ಸಮೃಧ್ಥ ಭಾಷೆ:  ಸುರೇಂದ್ರನಾಥ ಶೆಟ್ಟಿ

ಉಡುಪಿ: ಕುಂದಾಪುರ ಕನ್ನಡ ಉದ್ಯಮದ ಭಾಷೆಯಲ್ಲ. ಇದು ಬದುಕಿನ ಭಾಷೆಯಾಗಿದೆ. ಹೀಗಾಗಿ‌ ಈ ಭಾಷೆ ಇಂದಿಗೂ ಜೀವಂತವಾಗಿದೆ. ಕುಂದಾಪುರ ಕನ್ನಡ ಭಾಷೆಯ ಬೆಳವಣಿಗೆಗೆ ಅಕಾಡೆಮಿಯ ಅಗತ್ಯವಿಲ್ಲ. ಇದು ಜನಮಾನಸದಲ್ಲಿ ಬೆರೆತಿರುವ ಸಮೃದ್ಧ ಭಾಷೆಯಾಗಿದೆ ಎಂದು ಉಡುಪಿ ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು. ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಗುರುವಾರ ಆಯೋಜಿಸಿದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡದ ಕಂಪನ್ನು ಪಸರಿಸುವ ಕುಂದಾಪುರ ಕನ್ನಡ […]