ಕುಂದಾಪುರ ಡಾ. ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ರಕ್ಷಕ ಶಿಕ್ಷಕರ ಸಭೆ
ಕುಂದಾಪುರ: ಈಗಿನ ಆಹಾರ ಪದ್ಧತಿ, ಮೊಬೈಲ್ ಬಳಕೆಗಳ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ದುರ್ಬಲ ಮನಸ್ಸಿನ ಮಕ್ಕಳ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು. ಇಂತಹ ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಸಾಮೂಹಿಕವಾಗಿ ವಿಚಾರಿಸುವುದಕ್ಕಿಂತ ಸಾಧ್ಯವಾದಷ್ಟು ಪ್ರತ್ಯೇಕವಾಗಿ ವಿಚಾರಣೆ ಅತಿ ಅವಶ್ಯಕ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ ಭಂಡಾರಿಯವರು ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ ಕಾಲೇಜಿನ […]