ಕುಂದಾಪುರ:  ಸೇತುವೆಗೆ ಕಾರು ಡಿಕ್ಕಿ ಹೊಡೆದು ಕೆಎಂಎಫ್ ನಿರ್ದೇಶಕ ಮೃತ್ಯು

ಕುಂದಾಪುರ: ಇಲ್ಲಿನ ಹಾಲಾಡಿ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕರೊಬ್ಬರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಎಂದು ಗುರುತಿಸಲಾಗಿದೆ. ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ವಾಪಾಸ್ಸು ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಶಂಕರನಾರಾಯಣ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ರಾಜೀವ ಶೆಟ್ಟಿ ಅವರು ವಿವಿಧ ಸಮಾಜಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ತಾಲೂಕು ಪಂಚಾಯತ್ ಸದಸ್ಯರಾಗಿ, ಕೆ.ಎಂ.ಎಫ್. ನಿರ್ದೇಶಕರಾಗಿ, ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ […]