ಕುಂದಾಪುರ: ಮಿಂಚಿನ ಕಾರ್ಯಾಚರಣೆ; ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ವಶ
ಕುಂದಾಪುರ: ಅಕ್ರಮವಾಗಿ ದಾಸ್ತಾನು ಮಾಡಿಟ್ಟುಕೊಂಡಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿಯನ್ನು ಕುಂದಾಪುರ ಆಹಾರ ನಿರೀಕ್ಷಕರು ಹಾಗೂ ಕುಂದಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕೋಟೇಶ್ವರದ ಹಾಲಾಡಿ ರಸ್ತೆಯ ಶೆಡ್ ವೊಂದರಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ತಲೆಮರೆಸಿಕೊಂಡ ಆರೋಪಿಗಳನ್ನು ಮಂಗಳೂರು ನಿವಾಸಿ ಆಜಾಮ್, ಕೋಟೇಶ್ವರ ನಿವಾಸಿ ಉದಯ್ ಕುಮಾರ್ ಶೆಟ್ಟಿ ಹಾಗೂ ಉಡುಪಿ ನಿವಾಸಿ ರಮಾ ಪೂಜಾರಿ ಎಂದು ಗುರುತಿಸಲಾಗಿದ್ದು, ಇವರ ಪತ್ತೆಗೆ ಪೋಲಿಸರು ಬಲೆ ಬೀಸಿದ್ದಾರೆ. ಕಾರ್ಯಾಚರಣೆ ಸಂದರ್ಭದಲ್ಲಿ […]