ಆಗಸ್ಟ್ 24 ರಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶುಶ್ರೂಷಕರ ಹುದ್ದೆ ನೇರ ಸಂದರ್ಶನ

ಉಡುಪಿ: ಕುಂದಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ-3 ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಲುವಾಗಿ ಆಗಸ್ಟ್ 24 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಶುಶ್ರೂಷಾ ತರಬೇತಿ ಹೊಂದಿದ, ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೊಂದಾಯಿತ ಅಭ್ಯರ್ಥಿಗಳು ಮೂಲ ದಾಖಲಾತಿ ಹಾಗೂ ದೃಢೀಕೃತ ಪ್ರತಿಯಿಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು […]