ಕುಂದಾಪುರ: ಬಾಲ್ಯವಿವಾಹ ನಡೆಯುತ್ತಿದ್ದ ಕಲ್ಯಾಣ ಮಂಟಪಕ್ಕೆ ಅಧಿಕಾರಿಗಳಿಂದ ದಾಳಿ
ಕುಂದಾಪುರ: ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿ ಎಂಬಲ್ಲಿ ಬಾಲ್ಯವಿವಾಹ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬಾಲ್ಯ ವಿವಾಹವನ್ನು ತಡೆದಿದ್ದಾರೆ. ತ್ರಾಸಿ ಮಹಾಗಣಪತಿ ಸಭಾಭವನದಲ್ಲಿ ತಲ್ಲೂರು ಗುಡ್ಡೆಯಂಗಡಿಯ 17 ವರ್ಷದ ಬಾಲಕಿಗೆ 28 ವರ್ಷದ ಹುಡುಗನೊಂದಿಗೆ ಮದುವೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಂಡು 200ಕ್ಕೂ ಹೆಚ್ಚು ಮಂದಿ ಮದುವೆ ಹಾಲ್ ನಲ್ಲಿ ಸೇರಿರುವ ಮಾಹಿತಿ ಬಂದ ಕೂಡಲೇ ಅಧಿಕಾರಿಗಳು ದಾಳಿ ನಡೆಸಿದ್ದರು. ಉಡುಪಿ ಜಿಲ್ಲಾ […]