ಕುಂದಾಪುರ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸರ ದಾಳಿ; ದೋಣಿ, ಟಿಪ್ಪರ್ ಸಹಿತ ಓರ್ವನ ಬಂಧನ

ಉಡುಪಿ: ಅಕ್ರಮ ಮರಳು ದಂಧೆ ಅಡ್ಡೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಓರ್ವ ಆರೋಪಿಯನ್ನು ಭಾನುವಾರ ಬಂಧಿಸಿದ್ದಾರೆ. ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ಕೊನೆಯಲ್ಲಿ ರಿಂಗ್ ರೋಡ್ ಸಮೀಪ ಪಂಚಗಂಗಾವಳಿ ಹೊಳೆಯಲ್ಲಿ ಕೆಲವು ಮಂದಿ ಹೊಳೆಯಿಂದ ಮರಳು ತೆಗೆದು ದೋಣಿಗೆ ತುಂಬಿಸುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನಂಜಾನಾಯ್ಕ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಉದಯ ಮೆಂಡನ್ ಎಂಬಾತನನ್ನು ವಶಕ್ಕೆ ಪಡೆದಿದ್ದು, […]