ಕುಂದಾಪುರದ ಕೋಡಿಯಲ್ಲಿ ಕಡಲಾಮೆಗಳ ಸಂರಕ್ಷಣೆ, ಚಿಕಿತ್ಸಾ ಕೇಂದ್ರ ಸ್ಥಾಪನೆ- ಅನಂತ ಹೆಗಡೆ ಅಶಿಸರ

ಉಡುಪಿ: ಕಡಲಾಮೆಗಳನ್ನು ಸಂರಕ್ಷಣೆ ಮಾಡಿ ಅವುಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಕುಂದಾಪುರದ ಕೋಡಿಯಲ್ಲಿ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು ಎಂದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶಿಸರ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾಹಿತಿ ನೀಡಿದರು. ಕುಂದಾಪುರ, ಕೋಡಿಯಲ್ಲಿ ಕಡಲಾಮೆ ಮೊಟ್ಟೆ ಇಡುವ ಪ್ರದೇಶಕ್ಕೆ ಭೇಟಿ ನೀಡಿದ್ದೇವೆ. ಕೆಲವು ಕಡಲಾಮೆಗಳು ದಡಕ್ಕೆ ಬಂದಾಗ ಗಾಯಗೊಂಡಿರುತ್ತವೆ. ಹಾಗಾಗಿ ಇವುಗಳಿಗೆ ಚಿಕಿತ್ಸೆ ನೀಡುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು ಎಂದರು. ಕುಂದಾಪುರ, ಪಂಚಗಂಗಾವಳಿ […]