ಕುಂದಾಪುರ: ಆಟೊ ನಿಲ್ದಾಣಕ್ಕೆ ನುಗ್ಗಿದ ಟಿಪ್ಪರ್; ನಾಲ್ಕು ಆಟೊ ಜಖಂ
ಕುಂದಾಪುರ: ಟಿಪ್ಪರ್ ಲಾರಿಯೊಂದು ಆಟೊ ನಿಲ್ದಾಣಕ್ಕೆ ನುಗ್ಗಿದ ಪರಿಣಾಮ ನಾಲ್ಕು ಆಟೊಗಳು ಜಖಂಗೊಂಡ ಘಟನೆ ಇಂದು ಮಧ್ಯಾಹ್ನ ಕುಂದಾಪುರ ತ್ರಾಸಿ ಸಮೀಪದ ಮುಳ್ಳಿಕಟ್ಟೆ ಕ್ರಾಸ್ ಬಳಿ ನಡೆದಿದೆ. ಟಿಪ್ಪರ್ ಚಾಲಕ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದನು. ಚಾಲಕ ಮುಳ್ಳಿಕಟ್ಟೆ ಕ್ರಾಸ್ ಬಳಿ ತಿರುವು ತೆಗೆದುಕೊಂಡ ವೇಳೆ ನಿಯಂತ್ರಣ ತಪ್ಪಿ ಟಿಪ್ಪರ್ ಬದಿಯಲ್ಲಿರುವ ಆಟೋ ಸ್ಟ್ಯಾಂಡ್ ಒಳಕ್ಕೆ ನುಗ್ಗಿದೆ. ಪರಿಣಾಮ ಪಾರ್ಕಿಂಗ್ ನಲ್ಲಿದ್ದ 4 ಆಟೋಗಳು ನಜ್ಜುಗುಜ್ಜಾಗಿವೆ. ಆಟೋ ಚಾಲಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಟಿಪ್ಪರ್ ಚಾಲಕನ […]