ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಫೆ. 23 ರಂದು ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ನಿವೇದಿತಾ ಪ್ರೌಢಶಾಲೆಯ ಶಿಕ್ಷಕ ಪ್ರದೀಪ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಜೀವನದಲ್ಲಿ ಸಂಸ್ಕಾರಗಳನ್ನು ಅಳವಡಿಸಿಕೊಂಡು ತಮ್ಮ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಕ್ರೀಡಾಕ್ಷೇತ್ರದಲ್ಲಿ ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಪೂರ್ವಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ […]
ಕುಂದಾಪುರ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ವೆಂಕಟರಮಣ ಸಮೂಹ ಸಂಸ್ಥೆಗೆ ಜನರೇಟರ್ ಕೊಡುಗೆ
ಕುಂದಾಪುರ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ವೆಂಕಟರಮಣ ಸಮೂಹ ಸಂಸ್ಥೆಗೆ ನೂತನ ಜನರೇಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಕೆನರಾ ಬ್ಯಾಂಕ್ ಮಣಿಪಾಲ ಇಲ್ಲಿನ ಪ್ರಧಾನ ವ್ಯವಸ್ಥಾಪಕರಾದ ಎಂ. ಜಿ. ಪಂಡಿತ್ ನೂತನ ಜನರೇಟರ್ ಅನ್ನು ಉದ್ಘಾಟಿಸಿ, ಸಂಸ್ಥೆಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ಕೆನರಾ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕಿ ಭಾರತಿ ವಸಂತ್, ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ವೆಂಕಟರಮಣ ಸಂಸ್ಥೆಯ ಖಜಾಂಚಿ ಕೆ. ಲಕ್ಷ್ಮೀ ನಾರಾಯಣ ಶೆಣೈ, ವೆಂಕಟರಮಣ ಪದವಿ ಪೂರ್ವ ಕಾಲೇಜಿನ […]
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಡಿ. 05 ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲ ಎ. ಲಕ್ಷ್ಮೀ ನಾರಾಯಣ ಚಾತ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಹಾಗೂ ವಾರ್ಷಿಕ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಬೇಕು. ಅಂತಹ ವಾತಾವರಣ ಶ್ರೀ ವೆಂಕಟರಮಣ ಸಂಸ್ಥೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಅದಕ್ಕೆ ಸ್ಪಂದಿಸಬೇಕು ಎಂದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಮಾತನಾಡಿ, ಕಡಿಮೆ ಶುಲ್ಕದಲ್ಲಿ […]