ಕುಂದಾಪುರ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಅಯ್ಯಪ್ಪ ಮಾಲಾಧಾರಿ ಮೃತ್ಯು

ಕುಂದಾಪುರ: ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಯ್ಯಪ್ಪ ವ್ರತಧಾರಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಹಾಡಿಮನೆ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ. ಸುಮಾರು 15 ಮಂದಿ ಅಯ್ಯಪ್ಪ ಮಾಲಾಧಾರಿಗಳು ಕೋಟೇಶ್ವರದಿಂದ ಹೆದ್ದಾರಿ ಮೂಲಕ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇಗುಲದೆಡೆಗೆ ಕಾಲ್ನಡಿಗೆ ಮೂಲಕ ಸಾಗುತ್ತಿದ್ದಾಗ ಅಪಘಾತ […]

ಕುಂದಾಪುರ: ಕಾರು- ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ಮೃತ್ಯು

ಉಡುಪಿ: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ದ್ವಿಚಕ್ರ ವಾಹನ ಸವಾರರಾದ ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು, ಇದರ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ […]