ಸುಡುಬಿಸಿಲಿಗೂ ಕುಗ್ಗದೇ ಕುಂದಾಪುರದ ಗ್ರಾಮಗ್ರಾಮಕ್ಕೆ ಹೋಗ್ತಿದ್ದಾರೆ ಆಶಾ ಕಾರ್ಯಕರ್ತೆಯರು: ಇವರ ಕಾರ್ಯವೈಖರಿಗೆ ಜನತೆಯ ಸಲಾಂ
ಕುಂದಾಪುರ: ಕಳೆದ ಒಂದು ತಿಂಗಳಿನಿಂದ ಲಾಕ್ಡೌನ್ ಹಿನ್ನೆಲೆಯಲ್ಲಿ ಜನ ಮನೆಯಲ್ಲಿದ್ದರೆ, ಇವರು ಬೀದಿಯಲ್ಲಿದ್ದಾರೆ. ಕೋವಿಡ್-19 ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ಸಮಗ್ರವಾಗಿ ತೊಡಗಿಸಿಕೊಂಡಿದ್ದಾರೆ. ಮನೆ ಮನೆ ಹತ್ತಿಳಿಯುತ್ತಿದ್ದಾರೆ. ದಯಮಾಡಿ ಮನೆಯಿಂದ ಹೊರ ಬರಬೇಡಿ. ನಿಮ್ಮ ಜೀವ ಉಳಿಸಿಕೊಳ್ಳಿ ಎಂದು ಮೊರೆಯಿಡುತ್ತಿದ್ದಾರೆ. ಪ್ರತಿ ಗ್ರಾಮದಲ್ಲಿಯೂ ಸುಡುಬಿಸಿಲಿನಲ್ಲಿಯೂ ಜಾಗೃತಿಯಲ್ಲಿ ತೊಡಗಿಸಿಕೊಂಡಿರುವ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯವೈಖರಿಯಿದು. ಕೊರೋನಾ ವಿರುದ್ಧ ಶಕ್ತಿಯುತ ಹೆಜ್ಜೆ: ಕುಂದಾಪುರ ಉಪವಿಭಾಗದ ಬೈಂದೂರು ಮತ್ತು ಕುಂದಾಪುರ ತಾಲೂಕಿನಲ್ಲಿ ಸುಮಾರು 300 ಕ್ಕೂ ಅಧಿಕ ಮಂದಿ ಅಂಗನವಾಡಿ ಕಾರ್ಯಕರ್ತೆಯರು ಫೀಲ್ಡ್ನಲ್ಲಿದ್ದು, […]