ಆಗಸ್ಟ್ 17, 18: ಬೆಂಗಳೂರಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನ ಆಚರಣೆ.

ಬೆಂಗಳೂರು: ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ ‘ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ’ವನ್ನು ಆಚರಣೆ ಮಾಡುತ್ತಿದ್ದು, ಈ ಸಲ ಬೆಂಗಳೂರಿನಲ್ಲಿ ಅದು ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ. ಈ ಬಾರಿ ಕುಂದಾಪುರ ಕನ್ನಡ ದಿನಾಚರಣೆಯು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ ನೆರವೇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಕುಂದಗನ್ನಡ ಲೋಕವನ್ನು ಭರ್ಜರಿಯಾಗಿ ಅನಾವರಣಗೊಳಿಸುವ ಈ ಕಾರ್ಯಕ್ರಮ ಆಗಸ್ಟ್ 17 ಮತ್ತು 18ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ನಡೆಯಲಿದೆ. ಬೆಂಗಳೂರು ಕುಂದಾಪ್ರ ಕನ್ನಡ ಪ್ರತಿಷ್ಠಾನ ಮೂಲಕ […]