ಕುಂದಾಪುರ: ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಉಡುಪಿ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ (ಅ.26) ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನೆಯಲ್ಲಿ ನೀರುಪಾಲಾಗಿದ್ದ ಕುಂದಾಪುರ ಮೂಲದ ಅಜಯ್ ಮೃತಪಟ್ಟಿದ್ದು, ಬೆಂಗಳೂರು ದಾಸರಹಳ್ಳಿ ನಿವಾಸಿ ಸಂತೋಷ್ ನೀರುಪಾಲಾದ ಮತ್ತೊಬ್ಬ ಯುವಕ. ಈತನಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನ ದಾಸರಹಳ್ಳಿಯಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ […]