ಕುಂದಾಪುರ: ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಅನೂಪ್ ಪೂಜಾರಿ ಅಂತ್ಯ ಸಂಸ್ಕಾರ
ಉಡುಪಿ: ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾದ ಯೋಧ ಅನೂಪ್ ಪೂಜಾರಿ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಕುಂದಾಪುರ ತಾಲೂಕಿನ ಬೀಜಾಡಿ ಕಡಲ ತೀರದಲ್ಲಿ ಇಂದು ನೆರವೇರಿತು. ಅನೂಪ್ ಪಾರ್ಥಿವ ಶರೀರಕ್ಕೆ ಸೇನಾಧಿಕಾರಿಗಳು, ಯೋಧರು ಗೌರವ ವಂದನೆ ಸಲ್ಲಿಸಿದರು. ಬಳಿಕ ಮೂರು ಸುತ್ತು ಕುಶಾಲ ತೋಪು ಸಿಡಿಸಿ ಪೊಲೀಸ್ ಗೌರವ ಸಲ್ಲಿಸಲಾಯಿತು. ಪತ್ನಿ ಮಂಜುಶ್ರಿಗೆ ತ್ರಿವರ್ಣ ಧ್ವಜ ಹಸ್ತಾಂತರ ಮಾಡಲಾಯಿತು. ಸಮುದ್ರ ತೀರದಲ್ಲಿ ಸಹೋದರ ಶಿವರಾಂ ಅವರು ಪಾರ್ಥಿವ ಶರೀರಕ್ಕೆ ಅಗ್ನಿ […]
ಕುಂದಾಪುರ:ಮೃತ ಯೋಧ ಅನೂಪ್ ಪೂಜಾರಿ ಮೃತದೇಹ ಬೀಜಾಡಿಯ ಸ್ವಗೃಹಕ್ಕೆ: ಕುಟುಂಬಿಕರು, ಆತ್ಮೀಯರು ಮತ್ತು ಅಭಿಮಾನಿಗಳಿಂದ ಅಂತಿಮ ದರ್ಶನ
ಕುಂದಾಪುರ : ಜಮ್ಮುಕಾಶ್ಮೀರ ಪೂಂಛ್‌ನಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31) ಅವರ ಪಾರ್ಥೀವ ಶರೀರವನ್ನು ಬುಧವಾರ ತಡರಾತ್ರಿ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಂದು ಇಂದು ಬೆಳಿಗ್ಗೆ ಬೀಜಾಡಿಯ ಸ್ವಗೃಹಕ್ಕೆ ತರಲಾಯಿತು. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಮಾನ ನಿಲ್ದಾಣಕ್ಕೆ ಭೇಟಿ, ಸೇನಾ ವಿಮಾನದಿಂದ ಪಾರ್ಥೀವ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ಯೋಧರೂ […]
ಕುಂದಾಪುರ: ಹುಟ್ಟೂರು ತಲುಪಿದ ಯೋಧ ಅನೂಪ್ ಪೂಜಾರಿ ಪಾರ್ಥಿವ ಶರೀರ
ಉಡುಪಿ: ಜಮ್ಮು-ಕಾಶ್ಮೀರದಲ್ಲಿ ನಡೆದ ವಾಹನ ಅಪಘಾತದಲ್ಲಿ ಹುತಾತ್ಮರಾದ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ ಪಾರ್ಥಿವ ಶರೀರ ಇಂದು ಅವರ ಹುಟ್ಟೂರಿಗೆ ತಲುಪಿದೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಿಗ್ಗೆ ಬೀಜಾಡಿಗೆ ರವಾನೆ ಮಾಡಲಾಯಿತು. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಸಲಾಯಿತು. ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಅಂತಿಮ ಯಾತ್ರೆ ಮುಗಿದ ಬಳಿಕ ಹುತಾತ್ಮ ಯೋಧನ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು. ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ […]