ಕುಂದಾಪುರ: ಶ್ರೀ ಅರೆಕಲ್ಲು ಬೊಬ್ಬರ್ಯ ದೇವಸ್ಥಾನಕ್ಕೆ ಕನ್ನ ಹಾಕಲು ಬಂದ ಕಳ್ಳ ಪೊಲೀಸರ ಕೈಗೆ ಸಿಕ್ಕಿ ಬಿದ್ದ

ಕುಂದಾಪುರ: ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಸಮೀಪವೇ ಇರುವ ಪ್ರಸಿದ್ಧವಾದ ಹೇರಿಕುದ್ರು ಶ್ರೀ ಅರೆಕಲ್ಲು ಬೊಬ್ಬರ್ಯ ದೇವಸ್ಥಾನಕ್ಕೆ ಕನ್ನ ಹಾಕಲು ಬಂದ ಕಳ್ಳನನ್ನು ಸಾರ್ವಜನಿಕರ ಸಹಕಾರದಲ್ಲಿ ಕುಂದಾಪುರ ಪೊಲೀಸರು ಬಂಧಿಸಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಭಟ್ಕಳ ತಾಲೂಕಿನ ಅಂಬರಹಿತ್ಲು, ಮುಂಡಳ್ಳಿ ನಿವಾಸಿ ಸತೀಶ ಮಹದೇವ ನಾಯ್ಕ (31) ಬಂಧಿತ ಆರೋಪಿ. ನಡೆದಿದ್ದೇನು? ದೈವಸ್ಥಾನದ ಆಡಳಿತ ಮೊಕ್ತೇಸರರಾದ ಹೆಚ್. ಶಂಕರ ಶೆಟ್ಟಿ ಮುಂಜಾನೆ ಮನೆಯಲ್ಲಿದ್ದ ಸಂದರ್ಭ ವ್ಯಕ್ತಿಯೊಬ್ಬರು ಕರೆ ಮಾಡಿ ದೈವಸ್ಥಾನದ ಬಳಿ ಯಾರೋ ಒಬ್ಬ ಅರಿಚಿತ ವ್ಯಕ್ತಿ […]