ಸುಮ್ಮನೆ ಕರೆ ಮಾಡಿ ಅಪ್ರಚಾರ ಮಾಡುವವರನ್ನು ಜೈಲಿಗಟ್ಟುತ್ತೇನೆ: ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪುರ: ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಇದರ ಮದ್ಯೆ ಕೆಲ ಕಿಡಿಗೇಡಿಗಳು ಸುಮ್ಮನೆ ಕರೆ ಮಾಡಿ ಅದನ್ನು ರೆಕಾರ್ಡ್ ಮಾಡಿ ಸೋಶೀಯಲ್ ಮೀಡಿಯಾದಲ್ಲಿ ಹರಿಯಬಿಡುತ್ತಿದ್ದಾರೆ. ಇದು ಇವತ್ತಿಗೆ ಕೊನೆಗೊಳ್ಳಬೇಕು. ನಾಳೆಯಿಂದ ಯಾರಾದರೂ ರೆಕಾರ್ಡ್ ಮಾಡಿ ಅದನ್ನು ವೈರಲ್ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಜೈಲಿಗಟ್ಟುತ್ತೇನೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಕುಂದಾಪುರ ತಾ.ಪಂ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣದ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಕಳೆದ […]