ಕುಂದಾಪುರ: ರೈತರಿಂದ ಮುಂಗಾರು ಬೆಳೆ ಸಮೀಕ್ಷೆಗೆ ಅವಕಾಶ.

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ದಿ ಪಡಿಸಲಾಗಿದೆ. ಇಲಾಖೆಯ ಪ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2024” ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.ನಂತರ “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಜನರೇಟ್ ಓ.ಟಿ.ಪಿ ಆಯ್ಕೆಯನ್ನು ಮಾಡಬೇಕು. ನಂತರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ […]