ಕುಂದಾಪುರ: ಸುಡುಮಣ್ಣಿಗೆ ಹಾಕಿದ್ದ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ!

ಉಡುಪಿ: ಗದ್ದೆಯಲ್ಲಿ ಕೃಷಿ ತ್ಯಾಜ್ಯ (ಸುಡುಮಣ್ಣು)ಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋದ ಸಂದರ್ಭದಲ್ಲಿ ಮೈಗೆ ಬೆಂಕಿ ತಗುಲಿ ರೈತರೊಬ್ಬರು ಸಜೀವ ದಹನವಾದ ದಾರುಣ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (80) ಎಂದು ಗುರುತಿಸಲಾಗಿದೆ. ಇವರು ಕೃಷಿ ಉದ್ದೇಶಕ್ಕಾಗಿ ತಮ್ಮ ಗದ್ದೆಯಲ್ಲಿ ಮಗಳು ಬೇಬಿಯೊಂದಿಗೆ ಕೃಷಿ ತ್ಯಾಜ್ಯ(ಸುಡುಮಣ್ಣು)ಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ಆವರಿಸಿದ್ದು, ಇದರಿಂದ ಕೂಡಲೇ ಎಚ್ಚೆತ್ತ ಬೇಬಿ […]