ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಕುಂದಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿ ವಂಚಿಸಿದ ಆರೋಪಿಗೆ ನ್ಯಾಯಾಲಯ 20 ವರ್ಷ ಕಠಿನ ಸಜೆ ನೀಡಿದೆ. 17ರ ಹರೆಯದ ನೊಂದ ಬಾಲಕಿಯನ್ನು ಕಾಲೇಜಿಗೆ ಹೋಗುವಾಗ ಸಂಪರ್ಕಿಸಿದ ಮಿಥುನ್‌ (21) ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ನಡೆಸಿದ್ದ. ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿ ಎಂದು ಗೊತ್ತಾಗಿತ್ತು. ಆಕೆಯ ತಂದೆ ನೀಡಿದ್ದ ದೂರಿನ ಮೇಲೆ ಕುಂದಾಪುರ ಇನ್‌ಸ್ಪೆಕ್ಟರ್‌ ನಂದಕುಮಾರ್‌ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ […]