ವ್ಯವಸ್ಥಿತ ಕ್ವಾರಂಟೈನ್ ಮಾಡುವುದರಲ್ಲಿ ಸರಕಾರ ವಿಫಲ: ಗೋಪಾಲ ಪೂಜಾರಿ
![](https://udupixpress.com/wp-content/uploads/2020/07/1kun3.jpg)
ಕುಂದಾಪುರ : ದೇಶಾದ್ಯಾಂತ ಲಾಕ್‍ಡೌನ್ ಮಾಡಿದ್ದರೂ, ಕೋವಿಡ್-19 ಸೋಂಕು ಹರಡುವಿಕೆಯ ಪ್ರಮಾಣ ಇಳಿಮುಖವಾಗದೆ ಇರುವುದು ಆತಂಕಗಳನ್ನು ಹೆಚ್ಚಿಸುತ್ತಿದೆ. ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿರುವುದರಿಂದ ಸಮುದಾಯಕ್ಕೆ ಸೋಂಕು ಹಬ್ಬುತ್ತಿದೆಯಾ ಎನ್ನುವ ಜಿಜ್ಞಾಸೆಯನ್ನು ಹುಟ್ಟುಹಾಕುತ್ತಿದೆ. ಮಹಾರಾಷ್ಟ್ರ ಹಾಗೂ ಹೊರ ಭಾಗಗಳಿಂದ ಬಂದವರನ್ನು ವ್ಯವಸ್ಥಿತವಾಗಿ ಕ್ವಾರಂಟೈನ್ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. ಕಟ್‍ಬೇಲ್ತೂರಿನ ತಮ್ಮ ನಿವಾಸದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಹೊರ ರಾಜ್ಯ ಹಾಗೂ ದೇಶಗಳಿಂದ ಬಂದವರಲ್ಲಿ […]