ಮರಳಿಗಾಗಿ ಶಾಸಕರ ಮನೆಯತ್ತ ಕಟ್ಟಡ ಕಾರ್ಮಿಕರ ಬೃಹತ್ ಪಾದಯಾತ್ರೆ: ಕಾರ್ಮಿಕರನ್ನು ಸ್ವಾಗತಿಸಿದ ಶಾಸಕ ಹಾಲಾಡಿ

ಕುಂದಾಪುರ: ಕುಂದಾಪುರ, ಬೈಂದೂರು ಭಾಗಗಳಲ್ಲಿ ಅವಶ್ಯವಿರುವ ಕಡೆಗಳಲ್ಲಿ ಮರಳು ತೆಗೆಯುವ ಕುರಿತು ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಕುಂದಾಪುರ ಹಾಗೂ ಬೈಂದೂರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ(ಸಿಐಟಿಯು) ಸಂಘಟನೆಯ ನೇತೃತ್ವದಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಮನೆಗೆ ಕಾರ್ಮಿಕರು ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಿದರು. ಬೆಳಿಗ್ಗೆ ಕುಂದಾಪುರದ ವಿನಾಯಕ ಥಿಯೇಟರ್ ಎದುರಿನಿಂದ ಆರಂಭಗೊಂಡ ಪಾದಯಾತ್ರೆಯಲ್ಲಿ ದಾರಿಯೂದ್ದಕ್ಕೂ ವಿವಿಧ ಗ್ರಾಮ ಘಟಕಗಳ ಕಾರ್ಯಕರ್ತರು ಹೂವನ್ನು ಎಸೆಯುವುದರ ಮೂಲಕ ಪಾದಯಾತ್ರೆಯನ್ನು ಸ್ವಾಗತಿಸಿದರು. ಸಂಜೆ ೪.೩೦ರ ಸುಮಾರಿಗೆ ಸಾವಿರಾರು […]