ಕುಂದಾಪುರ: ಅಪೂರ್ಣ ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ
ಉಡುಪಿ: ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಗಸ್ಟ್ 16 ರಂದು ನೇಮಕಾತಿ ಅಧಿಸೂಚನೆ ಹೊರಡಿಸಿ, ಸೆಪ್ಟಂಬರ್ 19 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 1ನೇ […]