ನ.1ರಿಂದ 7 ರವರೆಗೆ ಕುಂದಾಪುರದಲ್ಲಿ “ಕನ್ನಡ ಹಬ್ಬ ಸಪ್ತಾಹ”

ಉಡುಪಿ: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಉದ್ದೇಶದಿಂದ ನ.1ರಿಂದ ನ.7 ರವರೆಗೆ “ಕನ್ನಡ ಹಬ್ಬ ಸಪ್ತಾಹ”ವನ್ನು ಕುಂದಾಪುರದಲ್ಲಿ ಆಯೋಜಿಸಲಾಗಿದೆ. ಈ ಅದ್ಧೂರಿ ಸಪ್ತಾಹಕ್ಕೆ ಚಾಲನೆ ನೀಡುವ ಸಲುವಾಗಿ ಅ.31ರಂದು ‘ಕನ್ನಡ ರಥೋತ್ಸವ’ ಎಂಬ ಪುರ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ […]