ಸೀಲ್ ಡೌನ್ ವಿಧಾನಗಳ ಕುರಿತು ಚರ್ಚೆ ನಡೆಸಲಾಗಿದೆ: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಕೊರೋನಾ ಪ್ರಾಬಲ್ಯ ಹೆಚ್ಚಾಗುತ್ತಿರುವ ಹಾಗೂ ಸಮುದಾಯ ಮಟ್ಟಕ್ಕೆ ಸೋಂಕು ಹರಡಬಹುದು ಎನ್ನುವ ಆತಂಕದ ಹಿನ್ನೆಲೆಯಲ್ಲಿ ಲಭ್ಯವಿರುವ ಆಸ್ಪತ್ರೆ, ಚಿಕಿತ್ಸಾ ಸೌಲಭ್ಯ, ಕ್ವಾರಂಟೈನ್, ಸೀಲ್‍ಡೌನ್ ಮಾಡುವ ವಿಧಾನಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿಸ್ತ್ರತ ಚರ್ಚೆ ನಡೆಸಿ ಅಭಿಪ್ರಾಯ ಪಡೆದುಕೊಳ್ಳಲಾಗಿದೆ ಎಂದು ರಾಜ್ಯ ಮೀನುಗಾರಿಕಾ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ. ಇಲ್ಲಿನ ಮಿನಿ ವಿಧಾನಸೌಧದಲ್ಲಿ ಬುಧವಾರ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕಾಲ ಕಾಲಕ್ಕೆ […]