ಕುಂದಾಪುರ ತಾಲೂಕು – ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ
ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನುಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು […]