ಕುಂದಾಪುರ: ಉಪನ್ಯಾಸಕರ ನೇಮಕಾತಿ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ: ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ, ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಕುಂದಾಪುರದಲ್ಲಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ 188 ಕಾಲೇಜುಗಳಲ್ಲಿ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು, ವಿಶ್ವವಿದ್ಯಾನಿಲಯವು ಇಂದು ಸಮಸ್ಯೆಗಳ ಗೂಡಾಗಿದೆ. ಈಗಾಗಲೇ ರಾಜ್ಯದೆಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಪದವಿ ವಿದ್ಯಾರ್ಥಿಗಳಿಗೂ ಸಹ ಈಗಾಗಲೇ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ […]