ಕೃಷಿ ಚಟುವಟಿಕೆ ನಡೆಸಲು ಲಾಕ್ಡೌನ್ ಅಡ್ಡಿಯಾಗುವುದಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ
ಕುಂದಾಪುರ: ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪೊಲೀಸರು, ಎಲ್ಲಾ ಅಧಿಕಾರಿಗಳು ಸಮಯದ ಪರಿಮಿತಿ ಮೀರಿ ಕೊರೋನಾ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿದ್ದು, ಅವರಿಗೆ ಸರಕಾರ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ಅವರು ಶನಿವಾರ ಕೊರೋನಾ ಕುರಿತಂತೆ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಕೈಗೊಂಡ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ತಾ.ಪಂ. ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೃಷಿ, ತೋಟಗಾರಿಕಾ ಬೆಳೆಗಳ ಸಾಗಾಟಕ್ಕೆ ಯಾವುದೇ ಸಮಸ್ಯೆ ಆಗದಂತೆ […]