ಹೆಮ್ಮಾಡಿ ಸರ್ವೀಸ್ ರಸ್ತೆ, ಕ್ರಾಸಿಂಗ್ ಬೇಡಿಕೆಗೆ ಶಾಸಕರ ಸ್ಪಂದನೆ

ಕುಂದಾಪುರ : ಜಾಲಾಡಿ – ಸಂತೋಷನಗರ ಮಧ್ಯೆ ಕ್ರಾಸಿಂಗ್ ಹಾಗೂ ಮೂವತ್ತುಮುಡಿ-ಜಾಲಾಡಿ ತನಕ ಎರಡೂ ಕಡೆಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣದ ಕುರಿತಂತೆ ಗ್ರಾಮಸ್ಥರ ಬೇಡಿಕೆಗಳಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಸುಕುಮಾರ ಶೆಟ್ಟಿ ಸ್ಪಂದಿಸಿದ್ದಾರೆ. ಭಾನುವಾರ ಗ್ರಾಮಸ್ಥರೆಲ್ಲರೂ ಸೇರಿ ಸಮಾಲೋಚನೆ ಸಭೆ ನಡೆಸಿ ಹೋರಾಟ ಸಮಿತಿ ರಚಿಸಿದ ಬೆನ್ನಲ್ಲೇ ಶಾಸಕರು ಸಮಿತಿಯ ಪದಾಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ನಿವಾಸಕ್ಕೆ ಕರೆದು ಮಾತುಕತೆ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ನೆಂಪುವಿನಲ್ಲಿರುವ ಶಾಸಕರ ಮನೆಗೆ ತೆರಳಿದ ಸಮಿತಿಯ ಪದಾಧಿಕಾರಿಗಳು ಹೆದ್ದಾರಿ ಅವೈಜ್ಙಾನಿಕ ಕಾಮಗಾರಿಗಳ […]