ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ:ಸಭೆ
ಕುಂದಾಪುರ: ಸಂಘದ ಸಿಬ್ಬಂದಿಗಳಿಗೆ ಆಡಳಿತ ಮಂಡಳಿಯು ಸಂಪೂರ್ಣ ಸಹಕಾರ ಕೊಟ್ಟರೆ ಆ ಸಂಸ್ಥೆಯು ಉತ್ತಮ ಪ್ರಗತಿಯತ್ತ ನಡೆಯುವುದರಲ್ಲಿ ಸಂಶಯವೇ ಇಲ್ಲ ಎಂದು ಪಂಚಗಂಗಾ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ದೇವಾಡಿಗ ಹೇಳಿದರು. ಅವರು ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಬುಧವಾರ ನಡೆದ ೨೦೧೮-೧೯ನೇ ಸಾಲಿನ ಪ್ರಗತಿ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಸಂಘದ ನಿರ್ದೇಶಕಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯೆ […]
ಕುಂದಾಪುರ :ನ್ಯಾಯಾಧೀಶ ಪ್ರಕಾಶ ಖಂಡೇರಿ ಅವರಿಗೆ ಗೌರವ ಸಮಾರಂಭ
ಕುಂದಾಪುರ : ಯಾವುದೇ ಅಪರಾಧ ಪ್ರಕರಣಗಳು ಘಟಿಸಿದಾಗಲೂ ತನಿಖಾಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೇ ತನಿಖೆಯ ಹೊಣೆಯನ್ನು ನಿರ್ವಹಿಸುತ್ತಾರೆ. ಪ್ರಕರಣ ದಾಖಲಿಸುವ ಹಾಗೂ ದೂರು ನೀಡುವ ಸಂದರ್ಭದಲ್ಲಿ ಉಂಟಾಗುವ ಸಣ್ಣ ತಪ್ಪುಗಳಿಂದಾಗಿ ನ್ಯಾಯಾಲಯದ ವಾರಂಟ್‌ಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿಯೂ ತೊಡಕಾಗುತ್ತದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಎಸ್.ಪಿ ಕುಮಾರಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಲ್ಲಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಸಂಜೆ ಪೊಲೀಸ್ ಇಲಾಖೆ, ಕುಂದಾಪುರ ಪೊಲೀಸ್ ಉಪ ವಿಭಾಗ ಹಾಗೂ ಅಭಿಯೋಜನೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಬೀಳ್ಕೊಡುಗೆ […]
ಕುಂದಾಪುರ ತಾ.ಪಂ. ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರೇ ಅಧ್ಯಕ್ಷರ ವಿರುದ್ಧ ಗರಂ
ಕುಂದಾಪುರ: ಪಾಲನಾವರದಿಗೆ ಉತ್ತರ ಕೊಡೋದು ಯಾರು? ಉತ್ತರ ಸಿಗದ ಮೇಲೆ ಸಭೆಗೆ ಬಂದು ಏನು ಪ್ರಯೋಜನ. ಅಧ್ಯಕ್ಷರಿಗೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲದೆ ಸಭೆಗೆ ತಯಾರಿ ನಡೆಸದೆ ಬರುತ್ತಾರೆ. ಸಾಮಾನ್ಯ ಪ್ರಶ್ನೆಗೂ ಅಧಿಕಾರಿಗಳಿಂದ ಉತ್ತರ ಪಡೆಯಲು ಆಗದ ಮೇಲೆ ಸಭೆ ನಡೆದು ಏನು ಪ್ರಯೋಜನ. ಇದು ಹೀಗೆಯೇ ಮುಂದುವರಿದರೆ ಮುಂದಿನ ಸಭೆಯಲ್ಲಿ ಪಾಲ್ಗೊಳ್ಳೋದಿಲ್ಲ ಎಂದು ಆಡಳಿತ ಪಕ್ಷದ ಸದಸ್ಯರೇ ಅಧ್ಯಕ್ಷರ ವಿರುದ್ಧ ಗರಂ ಆದ ಘಟನೆ ಕುಂದಾಪುರ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಪಂಚಾಯಿತಿ […]
ಕುಂದಾಪುರ: ಕೊಟ್ಟಿಗೆಯಿಂದ ಹೊತ್ತೊಯ್ದಿದ್ದ ದನ ಪತ್ತೆ ಹಚ್ಚಿದ ಪೊಲೀಸರು: ಆರೋಪಿಗಳು ಪರಾರಿ
ಕುಂದಾಪುರ: ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಯಳಜಿತ್ ಎಂಬಲ್ಲಿ ದಾರು ಗೌಡ್ತಿ ಮನೆಯ ಕೊಟ್ಟಿಗೆಯಲ್ಲಿದ್ದ ಎರಡು ದನ ಹಾಗೂ ಪಾರ್ವತಿ ಎನ್ನುವರ ಮನೆಯ ಕೊಟ್ಟಿಗೆಯಲ್ಲಿದ್ದ ಮೂರು ದನಗಳನ್ನು ಮಂಗಳವಾರ ತಡರಾತ್ರಿ ದುಷ್ಕರ್ಮಿಗಳು ಹೊತ್ತೊಯ್ದಿದ್ದು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬೈಂದೂರು ಪೊಲೀಸರು ಐದು ದನಗಳನ್ನು ಪತ್ತೆ ಹಚ್ಚಿದ್ದಾರೆ. ಮಂಗಳವಾರ ತಡರಾತ್ರಿ ಎರಡು ಮನೆಗಳ ಕೊಟ್ಟಿಗೆಗೆ ನುಗ್ಗಿದ ದುಷ್ಕರ್ಮಿಗಳು ಐದು ದನಗಳನ್ನು ಕದ್ದಿದ್ದು ಮಾರನೇ ದಿನ ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಅಲ್ಲದೇ ವಿಧಾನ ಪರಿಷತ್ […]
ಕುಂದಾಪುರ:ಹಲ್ಲೆ ನಡೆಸಿದ್ದ ವ್ಯಕ್ತಿಗೆ ಶಿಕ್ಷೆ:
ಕುಂದಾಪುರ: 2016 ಜುಲೈ 10 ರಂದು ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ವೆ ಗ್ರಾಮದ ಸೂರ್ಗೋಳಿ ಜಲ್ಲಿ ಕ್ರಷರ್ ಲೇಬರ್ ರೂಂನಲ್ಲಿ ಸಾಲದ ಹಣದ ವಿಚಾರದಲ್ಲಿ ವ್ಯಕ್ತಿಯೋರ್ವ ಕತ್ತಿಯಿಂದ ಇನ್ನೋರ್ವನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಬಗ್ಗೆ ಅಪರಾಧ ಸಾಭೀತಾಗಿದ್ದು ಕುಂದಾಪುರದಲ್ಲಿನ ಹೆಚ್ಚುವರಿ ಜಿಲ್ಲ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಈ ಬಗ್ಗೆ ಮಂಗಳವಾರ ಅಪರಾಧಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಕಾರ್ಮಿಕ ರಾಜಕುಮಾರ್ ಹಾಗೂ ಗದಗದ ಯಲ್ಲಪ್ಪ ನಡುವಿನ ಹಣಕಾಸು ವಿಚಾರದ ಮಾತುಕತೆಯಲ್ಲಿ ಯಲ್ಲಪ್ಪ ರಾಜಕುಮಾರ್ ಮೇಲೆ […]