ಇಲ್ಲಿ ವಿದ್ಯಾರ್ಥಿಗಳಿಗೆ ಪಾಠ ಇಲ್ಲ, ಬರೀ ಆಟ ಮಾತ್ರ: ಶಿಕ್ಷಕರೇ ಇಲ್ಲ,ಮಕ್ಕಳಿಗೆ ಆಟದ ಮೈದಾನವೇ ಎಲ್ಲಾ !

ಶ್ರೀಕಾಂತ ಹೆಮ್ಮಾಡಿ, ಕುಂದಾಪುರ ಕುಂದಾಪುರ: ಸರ್ಕಾರಿ ಶಾಲೆ ಉಳಿಸಿ-ಬೆಳೆಸಿ ಎನ್ನುವ ಸರ್ಕಾರದ ಆಶಯ ಕೇವಲ ಘೋಷಣೆಗಳಿಗಷ್ಟೇ ಸೀಮಿತವಾಗಿಬಿಟ್ಟಿವೆ. ಆಳುವ ಸರ್ಕಾರಗಳು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯ, ಬೇಜವಾಬ್ದಾರಿ ನಡೆಗಳಿಂದಾಗಿ ಇಂದು ಅನೇಕ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದು ತಲುಪಿದರೂ ಇನ್ನೂ ಕೂಡ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗಳು ಪಾಠ ಕಲಿತಂತೆ ಕಾಣುತ್ತಿಲ್ಲ. ಪಶ್ಚಿಮಘಟ್ಟದ ಬುಡ ಎಂದು ಕರೆಯಲ್ಪಡುವ ಯಡಮೊಗೆ ಗ್ರಾಮಪಂಚಾಯತ್ ವ್ಯಾಪ್ತಿಯ ಹಲವರಿಮಠ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಮೂರು ದಿನಗಳಿಂದ ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. […]