ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. ನಿಧನ

ಉಡುಪಿ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. (59) ಅವರು ಅನಾರೋಗ್ಯದಿಂದ ನಿಧನ ಹೊಂದಿದರು. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು, ಕಳೆದ ಆಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ‌ ಪೊಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪ ಅವರು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಕಾಲ ಚಿಕಿತ್ಸೆ‌ ಪಡೆದರೂ‌ ಅವರ ಆರೋಗ್ಯದಲ್ಲಿ ಯಾವುದೇ ಗಣನೀಯ ಚೇತರಿಕೆ ಕಂಡುಬಂದಿರಲಿಲ್ಲ. ಬುಧವಾರ ರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ […]