ಕುಂದಾಪುರ: ಸಾರಿಗೆ ಸಂಚಾರ ಮತ್ತಷ್ಟು ಬಿಗಿ: ಪೊಲೀಸರ ಹೊಸಕ್ರಮಕ್ಕೆ ಸಾರ್ವಜನಿಕರು ಕೆಂಡಾಮಂಡಲ

ಕುಂದಾಪುರ: ಲಾಕ್‌ಡೌನ್‌ಗೆ ಸಾರ್ವಜನಿಕರು ಹೊಂದಿಕೊಳ್ಳುತ್ತಿರುವ ಹೊತ್ತಲ್ಲೇ ಮಂಗಳವಾರ ಬೆಳಿಗ್ಗೆಯಿಂದ ಏಕಾಏಕಿ ನಗರದಲ್ಲಿ ಸಾರಿಗೆ ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಬಿಗಿಗೊಳಿಸಿದ ಪೊಲೀಸರ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್-೧೯ ಹಿನ್ನೆಲೆ ಜಿಲ್ಲಾಡಳಿತವು ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗಾಗಿ ನಿಗದಿಪಡಿಸಿದ ಅವಧಿಯಲ್ಲಿ ನಗರದಲ್ಲೆಲ್ಲೆಡೆ ವಾಹನ ದಟ್ಟಣೆಯಾಗುತ್ತಿದೆ ಎಂಬ ದೂರಿನ ಮೇರೆಗೆ ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್ ಮಾರ್ಗದರ್ಶನದಲ್ಲಿ ಪೊಲೀಸರು ಈ ಹೊಸಕ್ರಮಕ್ಕೆ ಮುಂದಾಗಿದ್ದಾರೆ. ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಾದ ಚಿಕ್ಕನ್‌ಸಾಲ್, ಚರ್ಚ್ ರಸ್ತೆ ಹಾಗೂ ಶಾಸ್ತ್ರೀ ವೃತ್ತವನ್ನು […]