ಶಾಸ್ತ್ರಿ ಸರ್ಕಲ್ ಚಲೋ” ನಮ್ಮ ಕಾರ್ಯಕ್ರಮವಲ್ಲ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಪಷ್ಟನೆ
ಕುಂದಾಪುರ: ಅಕ್ಟೋಬರ್ 20ರ ಭಾನುವಾರ ಕುಂದಾಪುರದಲ್ಲಿ ನಡೆಯಲಿದೆ ಎನ್ನಲಾಗಿರುವ “ಶಾಸ್ತ್ರಿ ಸರ್ಕಲ್ ಚಲೋ” ಎಂಬ ಹೆಸರಿನ ಕಾರ್ಯಕ್ರಮಕ್ಕೂ “ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ”ಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಮತ್ತು ಪ್ರಧಾನ ಕಾರ್ಯದರ್ಶಿ ನಾಗರಾಜ ರಾಯಪ್ಪನ ಮಠ ಸ್ಪಷ್ಟಪಡಿಸಿದ್ದಾರೆ. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಸಂಯೋಜಿತವಾಗಿರುವ […]