ಕುಂದಾಪುರ:ಶಾಲಾ ಶಿಕ್ಷಕಿಯ ಮೇಲೆ ದೌರ್ಜನ್ಯ ಖಂಡಿಸಿ ಶಿಕ್ಷಕರ ಪ್ರತಿಭಟನೆ
ಕುಂದಾಪುರ: ಬೈಂದೂರು ವಲಯದ ಉಪ್ಪುಂದ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಕರ್ತವ್ಯ ನಿರತ ಶಿಕ್ಷಕಿಗೆ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿದರು. ಶನಿವಾರ ಬೈಂದೂರು ತಹಶೀಲ್ದಾರ್ ಕಚೇರಿಯಲ್ಲಿ ಕಪ್ಪುಪಟ್ಟಿ ಧರಿಸಿ ಬೃಹತ್ ಪ್ರತಿಭಟನೆ ನಡೆಸಿದ ಬಳಿಕ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ಬಂದ ಶಿಕ್ಷಕರು ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಅವರಿಗೆ ಮನವಿ ನೀಡಿ ಆರೋಪಿಯನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು […]
ಕುಂದಾಪುರ: ವಿದ್ಯುತ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ
ಕುಂದಾಪುರ: ಜಿಲ್ಲೆಯ ಜನಸಾಮಾನ್ಯರು ಹಲವಾರು ಸಮಸ್ಯೆಗಳಿಂದ ಕೆಲಸವಿಲ್ಲದೇ ಆದಾಯ ಕುಂಠಿತವಾಗಿರುವುದು ಒಂದಡೆಯಾದರೆ ರಾಜ್ಯದಲ್ಲಿ ಬರಪರಿಸ್ಥಿತಿ ಇರುವ ಸನ್ನಿವೇಶದಲ್ಲಿ ಸರಕಾರವು ವಿದ್ಯುತ್ ದರ ಏರಿಕೆ ಮಾಡಿರುವುದು ಜನರಿಗೆ ಬಗೆದ ದ್ರೋಹವಾಗಿದೆ ಎಂದು ಸಿಪಿಎಂ ಪಕ್ಷದ ಕುಂದಾಪುರ ಕಾರ್ಯದರ್ಶಿ ಎಚ್ ನರಸಿಂಹ ಹೇಳಿದರು. ಅವರು ಕುಂದಾಪುರ ಮೆಸ್ಕಾಂ ಕಛೇರಿ ಎದುರು ವಿದ್ಯುತ್ ದರ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.ಜನರು ಸಂಕಷ್ಟದಲ್ಲಿದ್ದರೂ ವಿದ್ಯುತ್ ಬಿಲ್ ಗಳನ್ನು ಪಾವತಿ ಮಾಡುತ್ತಿದ್ದಾರೆ.ವಿದ್ಯುತ್ ಸೋರಿಕೆಯು ತಡೆಯಲಾಗುತ್ತಿದೆ ಎಂದು ಹೇಳಲಾಗುತ್ತಿದ್ದರೂ ಸರಕಾರವು ದರ ಏರಿಕೆ ಮಾಡಿ […]