ಕುಂದಾಪುರ:ದಸರಾ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಸಿನನ್.

ಕುಂದಾಪುರ : ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎತ್ತರ ಜಿಗಿತದಲ್ಲಿ ಸಿನನ್ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿಯ ಸಾಧನಪಥ ಇನ್ನಷ್ಟು ಬೆಳೆಯಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.