ಕುಂದಾಪುರ: ಚಡ್ಡಿ ಮತ್ತು ಬನಿಯನ್ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿ
ಉಡುಪಿ: ಕುಂದಾಪುರದ ಕೋಡಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಚಡ್ಡಿ ಮತ್ತು ಬನಿಯನ್ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದು, ಆತನನ್ನು ಕಂಡು ಅನುಮಾನಗೊಂಡ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಂದಾಪುರ ತಾಲೂಕಿನ ಕೋಡಿ ಭಾಗದ ಫಿಶರೀಸ್ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಸುಮಾರು 30 ರಿಂದ 35 ವರ್ಷ ವಯಸ್ಸಿನ ಯುವಕ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ವಿಚಾರಿಸಿದಾಗ ಸರಿಯಾದ ಉತ್ತರ ನೀಡದೆ ಇದ್ದ ಕಾರಣ ಅನುಮಾನಗೊಂಡ ಸ್ಥಳೀಯರು ಆತನನ್ನು ಹಿಡಿದು […]