ಕುಂದಾಪುರ: ಸಾಲಬಾಧೆಯಿಂದ ಮನನೊಂದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ; ರಕ್ಷಿಸಲು ಬಾವಿಗೆ ಹಾರಿದ ಮಗ ಕೂಡ ಮೃತ್ಯು-ತಂದೆ ಮಗನನ್ನು ರಕ್ಷಿಸಲು ಮುಂದಾದ ತಾಯಿ ಸ್ಥಿತಿ ಗಂಭೀರ

ಉಡುಪಿ: ಸಾಲಬಾಧೆಯಿಂದ ಮನನೊಂದು ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗ ಕೂಡಾ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ತಂದೆ-ಮಗ ಬಾವಿಗೆ ಹಾರಿದ್ದನ್ನು ಗಮನಿಸಿ ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲತಃ ಕುಂದಾಪುರದವರಾದ ಮಾಧವ ದೇವಾಡಿಗ ಕುಟುಂಬ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಸುಮಾರು ಏಳು ವರ್ಷದಿಂದ ಬಾಡಿಗೆ ಮನೆಯೊಂದರಲ್ಲಿ […]