ಕುಂದಾಪುರ:ಅಕ್ರಮ ಮರಳು ಸಾಗಿಸುತ್ತಿದ್ದ ಏಳು ಮಂದಿ ಬಂಧನ
ಕುಂದಾಪುರ: ಮೀನು ಸಾಗಾಟದ ಇನ್ಸುಲೇಟರ್ ವಾಹನವೊಂದರಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿರುವಾಗ ಪೊಲೀಸರು ವಾಹನ ಸಮೇತ ಏಳು ಮಂದಿಯನ್ನು ಬಂಧಿಸಿದ ಘಟನೆ ಸೋಮವಾರ ಬೆಳಿಗ್ಗೆ ಕುಂದಾಪುರದ ಬೀಜಾಡಿ ಎಂಬಲ್ಲಿ ನಡೆದಿದೆ. ಇನ್ಸುಲೇಟರ್ ವಾಹನ ಚಾಲಕ ಕಾಸರಗೋಡು ಪಾವೂರು ಮಂಜೇಶ್ವರದ ಅಬ್ದುಲ್ ಸತ್ತಾರ್ (೨೩), ಬ್ರಹ್ಮಾವರ ವಾರಂಬಳ್ಳಿ ನಿವಾಸಿಗಳಾದ ಮಂಜುನಾಥ್ (೧೯), ಶ್ರೀಕಾಂತ್ (೨೮), ಶರಣಪ್ಪ (೧೯), ಮಂಗಳೂರು ಬಿಜೈ ನಿವಾಸಿ ರಾಜೇಶ್ ಶೆಟ್ಟಿ (೪೦), ಸುರತ್ಕಲ್ ಕುಳಾಯಿ ನಿವಾಸಿ ಸುಕೇಶ್ ಕೋಟ್ಯಾನ್ (೩೪), ಕಾಸರಗೋಡು ಪಾವೂರಿನ ನೌಶಾದ್ ಅಲಿ […]