ಕುಂದಾಪುರ: ಮಂಗಳೂರು ವಿವಿಯಿಂದ ಅನುಭವಿಸುತ್ತಿರುವ ಸಮಸ್ಯೆ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಶೈಕ್ಷಣಿಕ ಸಮಸ್ಯೆಯ ಬಗ್ಗೆ ಡಿ.15 ರಂದು ಎಬಿವಿಪಿ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಕುಂದಾಪುರದ ಶಾಸ್ತ್ರಿ ವೃತ್ತದಿಂದ ಮಿನಿವಿಧಾನಸೌಧದ ತನಕ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಸಂಪರ್ಕ ಪ್ರಮುಖ್ ರಾಹುಲ್ ಶೆಟ್ಟಿ , ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದ ಹಿನ್ನೆಲೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಸಮಸ್ಯೆಯಾಗುತ್ತಿದೆ. ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದೇ […]

ವಾರಾಹಿ ಏತ ನೀರಾವರಿ ಯೋಜನೆಗಾಗಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ಉಡುಪಿ: ವಾರಾಹಿ ಏತ ನೀರಾವರಿ ಯೋಜನಾ ಕಾಮಗಾರಿಗೆ ಸಂಬಂಧಿಸಿದಂತೆ ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಸರ್ವೇ ನಂ. 139 ರಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 316 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 23 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ […]

ಕುಂದಾಪುರ: ಡಿ. 17 ರಂದು ಹಾರ್ದಳ್ಳಿ ಮಂಡಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ

ಕುಂದಾಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಡಿಸೆಂಬರ್ 17 ರಂದು ಬೆಳಗ್ಗೆ 11 ಗಂಟೆಗೆ ಕುಂದಾಪುರ ತಾಲೂಕು ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ (ಪ್ರೌಢಶಾಲಾ ವಿಭಾಗ) ಗ್ರಾಮ ವಾಸ್ತವ್ಯ ಮಾಡಲಿದ್ದು, ಸದ್ರಿ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ಸಲ್ಲಿಸುವಂತೆ ಹಾಗೂ ಗ್ರಾಮಸ್ಥರು ಭಾಗವಹಿಸಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಕೋಟ ಸಹಕಾರಿ ವ್ಯಾವಸಾಯಿಕ ಸಂಘದ ನೂತನ ಸಭಾಭವನ, ಗೋದಾಮು ಹಾಗೂ ಸೇವಾ ಕೇಂದ್ರ ಉದ್ಘಾಟನೆ

ಕುಂದಾಪುರ: ಭಾನುವಾರದಂದು ಕೋಟ ಸಹಕಾರಿ ವ್ಯಾವಸಾಯಿಕ ಸಂಘದ ಪ್ರಧಾನ ಕಚೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಬಿ.ಸಿ. ಹೊಳ್ಳ ಸ್ಮಾರಕ ಸಭಾಭವನ, ಗೋದಾಮು ಮತ್ತು ಸೇವಾ ಕೇಂದ್ರದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರು ನೆರವೇರಿಸಿ ಮಾತನಾಡಿ, ಕೋಟ ಸಿಎ ಬ್ಯಾಂಕ್ ರೈತರು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಶಕ್ತಿ ತುಂಬಿದ ಸಂಸ್ಥೆಯಾಗಿದೆ. ಪ್ರಸ್ತುತ ತಿಮ್ಮ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿ ಮುನ್ನಡೆಯುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಿ‌. ತಿಮ್ಮ ಪೂಜಾರಿ ವಹಿಸಿದ್ದರು. […]

ಉಡುಪಿಗೂ ಕಾಲಿಟ್ಟಿತು ಕೆಂಗಣ್ಣು ರೋಗ: ದ.ಕದಲ್ಲಿ ಸೋಂಕಿತರ ಪ್ರಮಾಣ ಇಳಿಕೆ

ಉಡುಪಿ: ದ.ಕನ್ನಡದಾದ್ಯಂತ ಜನಸಾಮಾನ್ಯರನ್ನು ಕಾಡಿದ ಕೆಂಗಣ್ಣು ರೋಗ ಇದೀಗ ಉಡುಪಿಗೂ ಕಾಲಿಟ್ಟಿದ್ದು, ರೋಗಕ್ಕೆ ತುತ್ತಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಕುಂದಾಪುರ ತಾಲೂಕುಗಳಲ್ಲಿ ಕೆಂಗಣ್ಣು ರೋಗಕ್ಕೆ ಹಲವರು ತುತ್ತಾಗಿದ್ದಾರೆ. ಈ ಮಧ್ಯೆ, ದ.ಕನ್ನಡದಲ್ಲಿ ರೋಗ ಬಾಧೆ ಇಳಿಕೆಯಾಗಿದ್ದು ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆ ಕಡಿಮೆಯಾಗಿದೆ. ಉಡುಪಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಂಗಣ್ಣಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಗಣ್ಣು ರೋಗವು ಒಂದು ವೈರಾಣು ಬಾಧಿತ ರೋಗವಾಗಿದ್ದು, ವಾರದೊಳಗೆ ಗುಣಮುಖವಾಗುತ್ತದೆ. ಕೆಂಗಣ್ಣು ರೋಗದಿಂದ […]