ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಡಿ02 ರಂದು ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ತ್ರಿಶಾ ಕಾಲೇಜಿನ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಭಾಗವಹಿಸಿ ಮಾತನಾಡಿ, ಜೀವನದ ಪ್ರಮುಖ ಘಟ್ಟವಾಗಿರುವ ಪಿಯುಸಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವಾಗ ಉಂಟಾಗುವ ಗೊಂದಲ, ಆತಂಕಗಳನ್ನು ದೂರ ಮಾಡಿ ಆತ್ಮ ವಿಶ್ವಾಸ ರೂಪಿಸಿಕೊಳ್ಳುವ ಬಗ್ಗೆ ಮತ್ತು ಉತ್ತಮ ಭವಿಷ್ಯದ ಕನಸು ಕಟ್ಟಿಕೊಂಡಿರುವ ವಿದ್ಯಾರ್ಥಿಗಳು ಪಿಯುಸಿ ನಂತರ ಮುಂದೇನು ಎನ್ನುವ ಗೊಂದಲಕ್ಕೆ ತೆರೆ ಎಳೆದು ಜೀವನದಲ್ಲಿ ಯಶಸ್ವಿಯಾಗಲು […]

ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಹಾಸನ ಮತ್ತು ಹೆಚ್. ಕೆ. ಎಸ್. ಪದವಿ ಪೂರ್ವ ಕಾಲೇಜು ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ ಡಿ01 ರಂದು ಜರುಗಿದ ಮೈಸೂರು ವಿಭಾಗ ಮಟ್ಟದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ […]

ಕುಂದಾಪುರ: ಡಿ. 3 ರಂದು ವಿದ್ಯುತ್ ವ್ಯತ್ಯಯ

ಕುಂದಾಪುರ: ಕೊಲ್ಲೂರು 33 ಕೆ.ವಿ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಮತ್ತು 110/33/11 ಕೆ.ವಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕಂಬದಕೋಣೆ ಹಾಗೂ ಮರವಂತೆ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮರವಂತೆ, ನಾವುಂದ, ಯಡೇರಿ, ಕಂಬದಕೋಣೆ, ಹೆರಂಜಾಲು, ಕಾಲ್ತೋಡು ಕಿರಿಮಂಜೇಶ್ವರ, ಬವಳಾಡಿ ಮತ್ತು ಕೆರ್ಗಾಲ್ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. […]

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಗೀತೋತ್ಸವ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಗೀತೋತ್ಸವ 2022 ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ್ ಇವರು ವಹಿಸಿದ್ದರು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲ ರಾಮ ದೇವಾಡಿಗ ಮಾತನಾಡಿ, ಕನ್ನಡ ನಾಡು- ನುಡಿ-ಸಂಸ್ಕೃತಿಗೆ ಸಂಬಂಧಿಸಿದ ಗೀತ ಗಾಯನದಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾದದ್ದು ಎನ್ನುತ್ತಾ ಕಾಲೇಜಿನ ವಿದ್ಯಾರ್ಥಿ ಪ್ರತಿಭೆಗಳನ್ನು ಅಭಿನಂದಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಾಗರಾಜ ಪಾಣರರವರು ಜಾನಪದ ಸಂಸ್ಕೃತಿಯ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

ಕುಂದಾಪುರ: ಮಂಗಳವಾರದಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ವಾರ್ಷಿಕೋತ್ಸವ ಸಮಾರಂಭ ನೆರವೇರಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ, ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ್ ಮಾತನಾಡಿ, ವಿದ್ಯಾರ್ಥಿಯು ತಂದೆ ತಾಯಿಯ ಕನಸನ್ನು ನನಸು ಮಾಡುವ ಶಿಕ್ಷಣ ಪಡೆದು ಜವಾಬ್ದಾರಿಯುತ ಸತ್ಪ್ರಜೆಯಾಗಿ ಭವ್ಯ ಭಾರತದ ನಿರ್ಮಾಣದಲ್ಲಿ ಸಹಕರಿಸಿ ಎಂದರು. ಅತಿಥಿಯಾಗಿದ್ದ ನಟಿ ಶ್ರೀಮತಿ ಪ್ರತಿಮಾ ನಾಯಕ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ […]