ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ದಿನ ಆಯೋಜನೆ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿನ.12ರಂದು ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಜರುಗಿದ ವ್ಯವಹಾರ ದಿನವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿ, ಕಲಿಕೆಯ ಹಂತದಲ್ಲಿಯೇ ಪ್ರತಿಯೊಬ್ಬ ವಿದ್ಯಾರ್ಥಿ ಭವಿಷ್ಯದ ಯೋಜನೆಗಳನ್ನು ಸ್ವಯಂ ರೂಪಿಸಿಕೊಳ್ಳುವ ಬದ್ಧತೆಯನ್ನು ಹೊಂದಿದರೆ ಬದುಕಿನಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು. ಶ್ರೀ ವೆಂಕಟರಮಣ ದೇವ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಕೆ. ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್ […]

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ನ.8 ರಂದು ವಿದ್ಯಾರ್ಥಿಗಳಿಗೆ “ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ” ಹಾಗೂ “ನಮಗೂ ಹಕ್ಕಿದೆ @75” ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ವಕೀಲ ಭವಿಷ್ ಕುಂದರ್ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು, ಮಾದಕ ವಸ್ತು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಇವರು ವಹಿಸಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ […]

ನವೆಂಬರ್ 12 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಆಯೋಜನೆ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಬಿಸಿನೆಸ್ ಡೇ (ವ್ಯವಹಾರದ ದಿನ) ಅನ್ನು ನವೆಂಬರ್ 12 ರಂದು ಬೆಳಿಗ್ಗೆ10 ರಿಂದ ಸಂಜೆ 5 ರ ವರೆಗೆ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುವುದರ ಮೂಲಕ ಅವರ ಭವ್ಯ ಭವಿಷ್ಯ ಪ್ರಕಾಶಮಾನವಾಗಬೇಕು ಎನ್ನುವ ನಿಟ್ಟಿನಲ್ಲಿ ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳನ್ನು ತರಗತಿಯಲ್ಲಿ ಅಭ್ಯಾಸ ಮಾಡುವುದರೊಂದಿಗೆ ಪ್ರಾಯೋಗಿಕ ಜ್ಞಾನದ ಅರಿವಾಗಬೇಕು ಎನ್ನುವುದು […]

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಹೆಮ್ಮಾಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ‘ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ’ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ್ ವಹಿಸಿದ್ದರು. ಸಮಾರಂಭವನ್ನು ಗೌರವಾನ್ವಿತ ಹಿರಿಯ ಸಿವಿಲ್ […]

ನವೆಂಬರ್ 8 ರಿಂದ10 ರ ವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳನ್ನು ಕೈಗೊಳ್ಳಲಾಗುವುದರಿಂದ ನವೆಂಬರ್ 8 ರಿಂದ 10 ರ ವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಕಚೇರಿ ಪ್ರಕಟಣೆ ತಿಳಿಸಿದೆ. ನವೆಂಬರ್ 8 ರಂದು 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, 110/11 ಕೆವಿ ಬೆಳ್ಮಣ್ ಉಪಕೇಂದ್ರದಿಂದ ಹೊರಡುವ ಬೋಳ ಫೀಡರ್ ಹಾಗೂ 110/11 ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ ಪದವು ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, […]