ಕಳಪೆ ಕಾಮಗಾರಿಯಿಂದ ಗಂಗೊಳ್ಳಿ ಬಂದರು ಜೆಟ್ಟಿ ಕುಸಿತ: ನೀರಿನಲ್ಲಿ ಹೋಮವಾಯ್ತು 12 ಕೋಟಿ ರೂಪಾಯಿ ಅನುದಾನ

ಕುಂದಾಪುರ: ಕಳಪೆ ಕಾಮಗಾರಿಯಿಂದ ಇಲ್ಲಿನ ಗಂಗೊಳ್ಳಿ ಬಂದರಿನಲ್ಲಿ 12 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಿಸಿದ್ದ ಜೆಟ್ಟಿ ಕುಸಿದಿದ್ದು, ನಿರ್ಮಾಣ ಕಾಮಗಾರಿಯು ನೀರಿನಲ್ಲಿಟ್ಟ ಹೋಮದಂತಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆರಂಭದಿಂದಲೂ ಅವೈಜ್ಞಾನಿಕ‌ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಸಮಸ್ಯೆಗೆ ತುತ್ತಾಗುತ್ತಿದ್ದ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಸುದ್ದಿಯಲ್ಲಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದೆ. 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ. ಜೆಟ್ಟಿ ಭಾಗವು ನಿರಂತರವಾಗಿ ಕುಸಿಯುತ್ತಿದ್ದರೂ […]

ವಾಲಿಬಾಲ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಕಾಲೇಜಿನ ಅನುಜ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಅನುಜ್ ಕುಮಾರ್ ಜೆ.ಎಸ್ ಇವರು ಕುಂದಾಪುರ ತಾಲ್ಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಮತ್ತು ಶಿಕ್ಷಕೇತರರು ಅಭಿನಂದಿಸಿದ್ದಾರೆ.

ಕೊಲ್ಲೂರು ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ ನಿರ್ಬಂಧಿತ ಚಟುವಟಿಕೆ ಕೈಗೊಳ್ಳದಿರುವಂತೆ ಮೆಸ್ಕಾಂ ಸೂಚನೆ

ಕೊಲ್ಲೂರು: ಕುಂದಾಪುರ ವಿಭಾಗದ ಬೈಂದೂರು ಉಪವಿಭಾಗದ ಗೋಳಿಹೊಳೆ ಗ್ರಾಮದ ಹಾಲ್ಕಲ್ ಎಂಬಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೊಲ್ಲೂರು ವಿದ್ಯುತ್ ಉಪಕೇಂದ್ರಕ್ಕೆ, ವಿದ್ಯುತ್ ಪೂರೈಕೆ ಸಲುವಾಗಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ನಿರ್ಮಾಣಗೊಂಡಿರುವ 20.84 ಕಿ.ಮೀ ಉದ್ದದ 33 ಕೆವಿ ವಿದ್ಯುತ್ ಮಾರ್ಗವು ಸೆಪ್ಟಂಬರ್ 29 ರ ನಂತರ ಯಾವುದೇ ದಿನದಲ್ಲಿ ಚೇತನಗೊಳ್ಳಲಿರುವುದು. ಆದುದರಿಂದ ಕೊಲ್ಲೂರು ಹೊಸ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜಾಗುವ ಮಾರ್ಗವು ಹಾದುಹೋಗುವ ಹೇರೂರು, ನಾವುಂದ, ಉಳ್ಳೂರು-11, ಉಪ್ರಳ್ಳಿ, ಕಂಬದಕೋಣೆ, ಶೇಡಿಗುಡ್ಡೆ, ಹೇರಂಜಾಲು, ಕಾಲ್ತೋಡು, ಬಲಗೋಣ, ಅರೆಶಿರೂರು, ಎಲ್ಲೂರು, […]

ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ

ಕುಂದಾಪುರ: ಭಾರತದ‌ ಪ್ರಧಾನಿ‌ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ಸೆ.27 ‌ಮಂಗಳವಾರದಂದು ಇಂಡಿಯನ್ ರೆಡ್‌‌ ಕ್ರಾಸ್ ಸೊಸೈಟಿ ಕುಂದಾಪುರ ಇಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ವೀಣಾ ಎಸ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಭಾರತದ‌ ಪ್ರಧಾನಿ‌ ನರೇಂದ್ರ ಮೋದಿಯವರ ಆಶಯದಂತೆ‌ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಟ್ರಸ್ಟ್‌ […]

ಟೆನ್ನಿಕ್ವಾಯಿಟ್ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ವಿದ್ಯಾಲಯ ಗಂಗೊಳ್ಳಿ ಇದರ ಜಂಟಿ ಆಶ್ರಯದಲ್ಲಿ ಸೆ. 24 ರಂದು ಜರುಗಿದ ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಖ್ಯಾತ್ ಮತ್ತು ಮನೀಶ್ ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸಿರಾಜ್ಯ ಮಟ್ಟದಲ್ಲಿ ಕಾಲೇಜನ್ನು ಪ್ರತಿನಿಧಿಸಲು ಸಜ್ಜಾಗಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಇವರಿಂದ ತರಬೇತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, […]