ಹಾಡು ನೀ ಹಾಡು: ಸಿಂಗಿಂಗ್ ರಿಯಾಲಿಟಿ ಶೋ ಆಡಿಷನ್ ಗೆ ಹರಿದು ಬಂತು ಪುಟಾಣಿಗಳ ದಂಡು

ಉಡುಪಿ: ಸಹಾಯ ಹಸ್ತ ಲಯನ್ಸ್ ಕ್ಲಬ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಅವಿಭಜಿತ ದ.ಕ ಜಿಲ್ಲೆಯ ಗಾನಕೋಗಿಲೆಗಳ ಪ್ರತಿಭೆ ಅನಾವರಣಗೊಳಿಸುವ ‘ಹಾಡು ನೀ ಹಾಡು’ ಸಂಗೀತ ರಿಯಾಲಿಟಿ ಶೋ ನ ಆಡಿಷನ್ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಹಾಗೂ ಕುಂದಾಪುರದ ಆರ್.ಎನ್ ಶೆಟ್ಟಿ ಪಿಯು ಕಾಲೇಜಿನಲ್ಲಿ ನಡೆಯುತ್ತಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಆಡಿಷನ್ ನಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುತ್ತಿದ್ದಾರೆ. ಸೆ. 18 ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿರುವ ಶಾರದಾ […]

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಕಾಲೇಜಿನ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು, ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳು ಸಮಾಜ ಕಟ್ಟುವ ದೇಗುಲವಿದ್ದಂತೆ: ಪ್ರೊ.ಎಂ. ಬಾಲಕೃಷ್ಣ ಶೆಟ್ಟಿ

ಕುಂದಾಪುರ: ಗುರು ಪರಂಪರೆಯಲ್ಲಿ ಗುರುವು ಒಳ್ಳೆಯ ಶಿಷ್ಯನನ್ನು ಪಡೆದಾಗ ಮಾತ್ರ ಶಿಕ್ಷಕ ಧನ್ಯನಾಗುತ್ತಾನೆ. ಸಮಾಜದಲ್ಲಿ ಗುರುವಿಗೆ ಮನ್ನಣೆಯಿದ್ದು, ಶಿಕ್ಷಕರು ತಾಯಿಗಿಂತ ಶ್ರೇಷ್ಠರು. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಸಮಾಜ ಕಟ್ಟುವ ದೇಗುಲವಿದ್ದಂತೆ ಎಂದು ಮಂಗಳೂರಿನ ರಾಮಕೃಷ್ಣ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಸೆ. 5 ರಂದು ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜ್ ಮತ್ತು ಸ್ಕೂಲ್‌ನ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ. ಸರ್ವಪಳ್ಳಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪ […]

ಸರ್ವಪಳ್ಳಿ ರಾಧಾಕೃಷ್ಣನ್ ಅವರನ್ನು ಸದಾ ಸ್ಮರಣೆ ಮಾಡುವುದು ಅವಶ್ಯ: ನರೇಂದ್ರ ಕುಮಾರ್ ಕೋಟ

ಕುಂದಾಪುರ: ಮೇಧಾವಿಗಳು, ತಿಳಿದವರ ಶಿಕ್ಷಣದ ಕುರಿತು ವ್ಯಾಖ್ಯಾನದ ಪ್ರಕಾರ ಶಿಕ್ಷಣ ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಾಗಬಾರದು, ಅದರಾಚೆಗೂ ನಮ್ಮ ಬದುಕಿಗೆ ಪೂರಕವಾದ ಶಿಕ್ಷಣವು ದೊರೆತಾಗ ಆ ಶಿಕ್ಷಣಕ್ಕೆ ಅರ್ಥ ಬರುತ್ತದೆ. ಇತ್ತೀಚೆಗಿನ ದಿನಗಳಲ್ಲಿ ಶಿಕ್ಷಣವು ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಹೊಸ ಶಿಕ್ಷಣ ನೀತಿಯೂ ಮಕ್ಕಳನ್ನು ತರಗತಿಯೊಳಗೆ ಮಾತ್ರವಲ್ಲದೇ ಅದರಾಚೆಗೆ ತೆರಡಿದಲು ಸಾಧ್ಯವಾಗಿದೆ. ವಿದ್ಯಾರ್ಥಿಗಳೆಲ್ಲರೂ ಶೈಕ್ಷಣಿಕ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಸರ್ವಪಳ್ಳಿ ರಾಧಾಕೃಷ್ಣನ್ ಅವರನ್ನು ಇಂದು ಮಾತ್ರ ನೆನೆಯುವುದು ಅಲ್ಲ, ಅವರನ್ನು ಸದಾ […]

ತ್ರೋಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ದಸರಾ ಕ್ರೀಡಾಕೂಟ-2022 ರ ತ್ರೋಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರ ತಂಡಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.