ಕುಂದಾಪುರ: ಸ್ವಚ್ಛ ಕರಾವಳಿ ಸುರಕ್ಷಿತ ಸಮುದ್ರ ಕುರಿತು ಜಾಗೃತಿ ಕಾರ್ಯಕ್ರಮ

ಕುಂದಾಪುರ: ಆಗಸ್ಟ್ 29ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಸೇವಾ ಯೋಜನೆ ಘಟಕ, ಯುಥ್ ರೆಡ್ ಕ್ರಾಸ್ ಘಟಕ, ಎನ್.ಸಿ.ಸಿ ಘಟಕ, ಭಾರತ ಸರ್ಕಾರದ ಭೂವಿಜ್ಞಾನ ಸಚಿವಾಲಯ, ದೆಹಲಿ, ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಮಂಗಳೂರಿನ ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ಪುರಸಭೆ ಕುಂದಾಪುರ ಇವರ ಸಹಯೋಗದಲ್ಲಿ ” ಸ್ವಚ್ಛ ಕರಾವಳಿ ಸುರಕ್ಷಿತ ಸಮುದ್ರ” ಕುರಿತು ಜಾಗೃತಿ ಕಾರ್ಯಕ್ರಮ ಕಾಲೇಜಿನ ರಾಧಾಬಾಯಿ ಹಾಲ್ ನಲ್ಲಿ ನಡೆಯಿತು. ಮಣಿಪಾಲದ ಎಂ.ಐ.ಟಿಯ ಸಹಪ್ರಾಧ್ಯಾಪಕ ಡಾ. ಅನಿಶ್ ಕುಮಾರ್ ವಾರಿಯರ್ […]

ರಾಜ್ಯ ಮಟ್ಟದ ಜೂನಿಯರ್ ವಿಭಾಗದ ಈಟಿ ಎಸೆತ: ವೆಂಕಟರಮಣ ಕಾಲೇಜಿನ ಓಂಕಾರ್ ಕಾಮತ್ ಗೆ ಕಂಚಿನ ಪದಕ

ಕುಂದಾಪುರ: ಕರ್ನಾಟಕ ರಾಜ್ಯ ಜೂನಿಯರ್ ಹಾಗೂ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2022 ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಜೂನಿಯರ್ ವಿಭಾಗದ ಈಟಿ ಎಸೆತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಓಂಕಾರ್ ಕಾಮತ್ ಕಂಚಿನ ಪದಕ ಪಡೆಯುವುದರ ಮೂಲಕ ಕೀರ್ತಿಶಾಲಿಯಾಗಿದ್ದಾರೆ. ಸಾಧನೆಗೈದ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.  

ತ್ರಿಶಾ ವಿದ್ಯಾ ಕಾಲೇಜಿನ ವತಿಯಿಂದ ರಕ್ತದಾನ ಶಿಬಿರ

ಉಡುಪಿ: ತ್ರಿಶಾ ವಿದ್ಯಾ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಮತ್ತು ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ ಇದರ ಸಹಯೋಗದಲ್ಲಿ ರಕ್ತದಾನ ಶಿಬಿರವು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್ ರಕ್ತದಾನ ಎನ್ನುವುದು ಜೀವ ಉಳಿಸುವ ಪ್ರಕ್ರಿಯೆಯಾಗಿದ್ದು, ಇಂತಹ ಶಿಬಿರಗಳು ಜನರಲ್ಲಿ ಮಾನವೀಯತೆಯನ್ನು ವೃದ್ಧಿಗೊಳಿಸುತ್ತವೆ ಎಂದರು. ಕಾರ್ಯಕ್ರಮದ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಚೇರ್ಮನ್ ಎಸ್.ಜಯಕರ […]

ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಕುಂದಾಪುರ: ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಓಪನ್- 3ನೇ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿ -2022 ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅದ್ವಿತ್ ಎ.ಎಲ್., ಕುಮಿಟೆ ವಿಭಾಗದಲ್ಲಿ ಪ್ರತಿನಿಧಿಸಿ ಚಿನ್ನದ ಪದಕವನ್ನು ಹಾಗೂ ಕಟಾದಲ್ಲಿ ಕಂಚಿನ ಪದಕವನ್ನು , ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಪಿ. ರಾವ್ ಕಟಾದಲ್ಲಿ ಚಿನ್ನದ ಪದಕವನ್ನು ಹಾಗೂ ಕುಮಿಟೆ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆಯುವುದರ ಮೂಲಕ […]

ಸೆಪ್ಟಂಬರ್ 3 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 3 ರಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ, ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಸ್ಪರ್ಧೆಗಳ ವಿವರ: ಪುರುಷರಿಗೆ: 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ ಓಟ, ಉದ್ದ ಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110ಮೀ ಹರ್ಡಲ್ಸ್, 4*100ಮೀ ರಿಲೇ, 4*400ಮೀ […]