ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಆಗಸ್ಟ್ 10 ರಂದು ಕುಂದಾಪ್ರ ಸಿರಿ ವೈಭೋಗ ಕಾರ್ಯಕ್ರಮ

ಕುಂದಾಪುರ: ಭಂಡಾರ್ ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಪ್ರಸ್ತುತ ಪಡಿಸುತ್ತಿದೆ ಗ್ರಂಥಾಲಯ ಕುಟಿ ವೈಭವಂ ಪುಸ್ತಕದ ಸೂರಿನಡಿಯಲ್ಲಿ ‘ಕುಂದಾಪ್ರ ಸಿರಿ ವೈಭೋಗ’ವು ಆಗಸ್ಟ್ 10 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜು ಗ್ರಂಥಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಂದಾಪುರದ ಆಚಾರ-ವಿಚಾರ-ಆಹಾರಕ್ಕೆ ಸಂಬಂಧಪಟ್ಟ ಪ್ರದರ್ಶನಗಳನ್ನು ಏರ್ಪಡಿಸಲಾಗುವುದು. ಸೂರಿನಡಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿರುವುದು. ಕಾಲೇಜಿನ ಇಂಗ್ಲಿಷ್, ಪತ್ರಿಕೋದ್ಯಮ ಮತ್ತು ಮನಶಾಸ್ತ್ರ ವಿದ್ಯಾರ್ಥಿಗಳು ನಡೆಸಿಕೊಡುವ ಈ ಕಾರ್ಯಕ್ರಮದ ನೇತೃತ್ವವನ್ನು ಪತ್ರಿಕೋದ್ಯಮ ವಿಭಾಗದ ಸುಮಲತಾ ಇವರು ವಹಿಸಲಿದ್ದಾರೆ.
ಕರಾವಳಿಯಲ್ಲಿ ವರುಣನ ಅಬ್ಬರ: ಕುಂದಾಪುರ-ಬೈಂದೂರು ತಾಲೂಕು ಶಾಲಾ-ಕಾಲೇಜುಗಳಿಗೆ ರಜೆ

ಕುಂದಾಪುರ: ಕರಾವಳಿಯ ಹಲವೆಡೆಗಳಲ್ಲಿ ಮುಸಲಧಾರೆ ಮಳೆಯಾಗುತ್ತಿದ್ದು, ಕುಂದಾಪುರ-ಬೈಂದೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಕುಂದಾಪುರ ಸಹಾಯಕ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಶಿರೂರು ಭಾಗವು ಸಂಪೂರ್ಣವಾಗಿ ಜಲಾವೃತವಾಗಿದ್ದು, ಕೆಳಪೇಟೆ, ಕರಾವಳಿ ಭಾಗಗಳು ಮುಳುಗಡೆಯಾಗಿದ್ದು ಮನೆಗಳಿಗೆ ಜಲದಿಗ್ಭಂಧನವಾಗಿದೆ. ರಸ್ತೆಗಳಲ್ಲಿ ಕೊಚ್ಚೆ ನೀರು ತುಂಬಿ ಹರಿಯುತ್ತಿದೆ. ಹೊಳೆಗಳೆಲ್ಲಾ ತುಂಬಿ ಹರಿಯುತ್ತಿದ್ದು, ನದಿ ದಂಡೆಯ ಮನೆಗಳೆಲ್ಲಾ ಮುಳುಗಡೆಯಾಗಿವೆ. ಈ ರೀತಿಯ ಜಲಪ್ರಳಯದಂತ ಸ್ಥಿತಿ ೧೯೧೩ ರಲ್ಲಿ ಕಂಡು ಬಂದಿತ್ತು, ಆ ಬಳಿಕ ಇದೇ ಮೊದಲ ಬಾರಿಗೆ ಇಂತಹ ಸ್ಥಿತಿ ಕಂದುಬಂದಿದೆ ಎಂದು ಇಲ್ಲಿನ […]
ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆಯವರ ಪತ್ನಿ ನಾಗರತ್ನ ಹೆಗ್ಡೆ ನಿಧನ

ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆಯವರ ಪತ್ನಿ ನಾಗರತ್ನ ಹೆಗ್ಡೆ(80) ಭಾನುವಾರ ಸಂಜೆ ಬಸ್ರೂರಿನ ತಮ್ಮ ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಲೂರು ಸಮೀಪದ ಕೂಡುರು ಮನೆಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದ್ದು, ಬೆಳಗ್ಗೆ 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇಡಲಾಗುವುದು ಎಂದು ಕುಟುಂಬಿಕರು ತಿಳಿಸಿದ್ದಾರೆ.
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಲಾವಿದ ರಾಮ್ ಶೆಟ್ಟಿ ಅತ್ತಿಕಾರ್ ಕುಂದಾಪ್ರ ಕನ್ನಡ ಆಚರಣೆಯ ಮಹತ್ವದ ಕುರಿತು ಮಾತನಾಡಿದರು. ಪ್ರಾಂಶುಪಾಲ ಗಣೇಶ್ ಮೊಗವೀರ ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆ ಅಗತ್ಯತೆ ಹಾಗೂ ಕುಂದಕನ್ನಡದ ಸಾಧಕರ ಕುರಿತು ಮಾಹಿತಿ ನೀಡಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಂಜು ಕಾಳವಾರ, […]
ಭಂಡಾರ್ಕಾರ್ಸ್ ಕಾಲೇಜು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ವಿಶ್ವವಿದ್ಯಾಲಯ ಮಟ್ಟದ ದೇಶಭಕ್ತಿ ಗೀತೆ, ಓಟದ ಸ್ಪರ್ಧೆ

ಕುಂದಾಪುರ: ನಾವು ದೇಶದ ಆಸ್ತಿಯಾಗಬೇಕು. ಆಜಾದಿ ಕಾ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಯುವಜನತೆ ದೇಶದ ಅಖಂಡತೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾಗಬೇಕು ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಜುಲೈ 26ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾಲಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಮತ್ತು ಸ್ವಾತಂತ್ರ್ಯ ಓಟದ ಸ್ಪರ್ಧೆಯನ್ನು […]