ಜರ್ಮನಿಯ ಮ್ಯೂನಿಚ್‌ನಲ್ಲಿ ದಂಪತಿಗಳ ಮೇಲೆ ಚೂರಿಯಿಂದ ಇರಿದ, ಕುಂದಾಪುರ ಮೂಲದ ಬಿ.ವಿ.ಪ್ರಶಾಂತ ಸಾವು

ಕುಂದಾಪುರ : ಜರ್ಮನಿಯ ಮ್ಯೂನಿಚ್‌ನಲ್ಲಿ ನೆಲೆಸಿರುವ ಉಡುಪಿ ಜಿಲ್ಲೆ ಕುಂದಾಪುರ ಮೂಲದ ಬಿ.ವಿ.ಪ್ರಶಾಂತ (51) ಹಾಗೂ ಸ್ಮೀತಾ (40) ದಂಪತಿಗಳ ಮೇಲೆ ಮಾ.29ರಂದು ಆಗಂತುಕನೊಬ್ಬ ಚೂರಿಯಿಂದ ಇರಿದ ಪರಿಣಾಮ ಪ್ರಶಾಂತ ಮೃತಪಟ್ಟು ಪತ್ನಿ ಸ್ಮೀತಾ ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಪ್ರಶಾಂತ ಅವರ ತಂದೆ ದಿ.ಬಿ.ಎನ್.ವೆಂಕಟರಮಣ ಹಾಗೂ ತಾಯಿ ವಿನಯ ಮೂಲತ ಶಿವಮೊಗ್ಗ ಜಿಲ್ಲೆಯ ಹೊಸನಗರದವರು. ವ್ಯವಹಾರ ಹಾಗೂ ಕೃಷಿ ಕಾರ್ಯಗಳಿಗಾಗಿ ಅವರು ಕುಟುಂಬ ಸಹಿತರಾಗಿ ಸಾಗರದಲ್ಲಿ ನೆಲೆಸಿದ್ದರು. ವೆಂಕಟರಮಣ ಅವರ ಪೂರ್ವಿಕರು ಕುಂದಾಪುರ ಸಮೀಪದ […]
ಕೆದೂರಿನ ಸ್ಪೂರ್ತಿಧಾಮ ಸಂಸ್ಥೆಯನ್ನು ಮುಚ್ಚುವ ಬಗ್ಗೆ ಸಂಬಂಧಪಟ್ಟವರಲ್ಲಿ ಚರ್ಚಿಸಿದ್ದೇನೆ: ಶ್ಯಾಮಲಾ ಕುಂದರ್

ಕುಂದಾಪುರ: ಕೆದೂರಿನ ಸ್ಪೂರ್ತಿಧಾಮ ಸಂಸ್ಥೆಯನ್ನು ಮುಚ್ಚುವ ಬಗ್ಗೆ ಸಂಬಂಧಪಟ್ಟವರಲ್ಲಿ ಚರ್ಚಿಸಿದ್ದೇನೆ. ಡಿಐಜಿ ಹಾಗೂ ಜಿಲ್ಲಾಧಿಕಾರಿಯವರ ಜೊತೆ ಈ ಬಗ್ಗೆ ಮಾತನಾಡಿದ್ದು, ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಖಂಡಿತವಾಗಿಯೂ ಸ್ಪೂರ್ತಿ ಸಂಸ್ಥೆ ಮುಚ್ಚುವ ಕೆಲಸದಲ್ಲಿ ಪೊಲೀಸ್ ಇಲಾಖೆ ಕೆಲಸ ನಿರ್ವಹಿಸುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಉಡುಪಿಯ ಶ್ಯಾಮಲಾ ಕುಂದರ್ ಹೇಳಿದರು. ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ […]
ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದು ರಂಗಭೂಮಿ: ಪಾರ್ವತಿ ಜಿ. ಐತಾಳ್

ಕುಂದಾಪುರ: ರಂಗಭೂಮಿ ತಂಡದ ನಿರ್ಮಾಣ ಅತ್ಯಂತ ಕ್ಷಿಷ್ಟಕರವಾದದ್ದು. ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದಕ್ಕೆ ಇಂತಹ ರಂಗಭೂಮಿಗೆ ಸಾಧ್ಯ. ಹೊಸ ಅಲೆಯ ಹೊಸ ಕಲ್ಪನೆಯ ನಾಟಕಗಳನ್ನು ಹಳ್ಳಿ ಹಳ್ಳಿಗೆ ತಲುಪಿದರೆ ಮಾತ್ರ ಇಂತಹ ಪ್ರಯೋಗಗಳು ಸಾರ್ಥಕ ಎಂದು ಸಾಹಿತಿ ಪಾರ್ವತಿ ಜಿ. ಐತಾಳ್ ಅಭಿಪ್ರಾಯಪಟ್ಟರು. ಅವರು ಯಕ್ಷದೀಪ ಕಲಾಟ್ರಸ್ಟ್ (ರಿ.) ತೆಕ್ಕಟ್ಟೆ ಇದರ ಮೂರನೇ ವರ್ಷದ ವಾರ್ಷಿಕೋತ್ಸವ ‘ರಂಗೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯಿರಿ ಮಾತನಾಡಿ, ಚಿಂತನೆ ಹಾಗೂ ಭಾವನೆಗಳನ್ನು […]
ಪ್ರತಿಭೆ ಪ್ರತಿ ವ್ಯಕ್ತಿಯಲ್ಲೂ ಇರುತ್ತದೆ, ಅರಿತುಕೊಳ್ಳುವ ಪ್ರಯತ್ನ ಮತ್ತು ಮನಸ್ಸು ಮಾಡಬೇಕು: ಡಾ.ಹೆಚ್.ಶಾಂತಾರಾಮ್

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಶೈಕ್ಷಣಿಕ ವರ್ಷ 2018-19ನೇ ಸಾಲಿನ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಆಡಳಿತಾಧಿಕಾರಿ ಡಾ.ಹೆಚ್.ಶಾಂತಾರಾಮ್ ಮಾತನಾಡಿ, ಪ್ರತಿಭೆ ಪ್ರತಿ ವ್ಯಕ್ತಿಯಲ್ಲೂ ಇರುತ್ತದೆ. ಅರಿತುಕೊಳ್ಳುವ ಪ್ರಯತ್ನ ಮತ್ತು ಮನಸ್ಸು ಮಾಡಬೇಕು. ಪೂರಕವಾಗಿ ಒಳ್ಳೆಯ ಸಾಧನೆ ಸಾಧ್ಯವಾಗುತ್ತದೆ. ಶಿಕ್ಷಣವೆಂದರೆ ಕೇವಲ ಪಾಠವಲ್ಲ. ಇದರಲ್ಲಿ ವ್ಯಕ್ತಿತ್ವ ವಿಕಸನವು ಒಂದು ಭಾಗವಾಗಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಸಹಕರಿಸುತ್ತದೆ. ಆದರೆ ಪ್ರತಿಯೊಬ್ಬ ವಿದ್ಯಾರ್ಥಿಯು ಪಾಠಕ್ಕೆ ಪೂರಕವಾಗಿರುವ ಅವಕಾಶಗಳನ್ನು […]
ಕತ್ತಿಯಿಂದ ತನ್ನನ್ನು ತಾನು ಕಡಿದುಕೊಂಡು ಜನರಲ್ಲಿ ಆತಂಕ ಸೃಷ್ಟಿಸಿದ ವಿಚಿತ್ರ

ಕುಂದಾಪುರ: ವ್ಯಕ್ತಿಯೋರ್ವ ಕತ್ತಿಯಿಂದ ತನ್ನನ್ನು ತಾನು ಕಡಿದುಕೊಂಡು ಜನರಲ್ಲಿ ಆತಂಕ ಸೃಷ್ಟಿಸಿದ ವಿಚಿತ್ರ ಹಾಗೂ ಕಳವಳಕಾರಿ ಘಟನೆಯೊಂದು ಕುಂದಾಪುರದಲ್ಲಿ ಭಾನುವಾರ ನಡೆದಿದೆ. ಕತ್ತಿಯಿಂದ ಕಡಿದುಕೊಂಡ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಾ ನಿವಾಸಿ ಮುದಿಯಪ್ಪ(35) ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನದ ಸುಮಾರಿಗೆ ಕುಂದಾಪುರದ ಹೊಸ ಬಸ್ ಸ್ಟ್ಯಾಂಡ್‍ನಲ್ಲಿ ಕೂತು ಕತ್ತಿಯಿಂದ ತನ್ನ ವೃಷಣ ಭಾಗವನ್ನು ಕುಯ್ದುಕೊಳ್ಳುತ್ತಿರುವಾಗ ಸಾರ್ವಜನಿಕರು ನೋಡಿ ಕತ್ತಿಯನ್ನು ಕಸಿದುಕೊಳ್ಳಲು ಯತ್ನಿಸಿದ್ದರು. ಕೂಡಲೇ ಆತ ಕತ್ತಿಯನ್ನು ಬೀಸುತ್ತಲೇ ತನ್ನ ಕುತ್ತಿಗೆ ಭಾಗವನ್ನು ಕಡಿಕೊಳ್ಳುತ್ತಾ ರಾಮಮಂದಿರ ರಸ್ತೆ ಮಾರ್ಗವಾಗಿ […]