ಮಹಿಳೆ ಅನುಮಾನಾಸ್ಪದ ಸಾವು: ತೀವ್ರಗೊಂಡ ಪೊಲೀಸ್ ತನಿಖೆ ಘಟನಾ, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಭೇಟಿ, ಪರಿಶೀಲನೆ

ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಹರೆಗೋಡು ಸಮೀಪದ ವಿಜಯ ಗೇರುಬೀಜ ಕಾರ್ಖಾನೆ ಸಮೀಪದ ಮನೆಯಲ್ಲಿ ವಾಸವಿದ್ದ ಮೀನು ಮಾರಾಟದ ಮಹಿಳೆ ಗುಲಾಬಿ(55) ಎಂಬವರ ಅನುಮಾನಾಸ್ಪದ ಸಾವಿನ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಘಟನಾ ಸ್ಥಳಕ್ಕೆ ಭಾನುವಾರ ಸಂಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಮಹಿಳೆ ಮನೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆ ಮಾಹಿತಿ ಪಡೆದಿದ್ದು, ಮುಂದಿನ ತನಿಖೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ […]
ಚಕ್ರವರ್ತಿ ಸೂಲಿಬೆಲೆ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಮಾಡಿರುವ ಭಾಷಣ ರಾಜಕೀಯಪ್ರೇರಿತವಾಗಿದೆ

ಕುಂದಾಪುರ: ಟೀಮ್ ಮೋದಿ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಮಾಡಿರುವ ಭಾಷಣ ರಾಜಕೀಯಪ್ರೇರಿತವಾಗಿದೆ ಎಂದು ಆರೋಪಿಸಿ ಭಾಷಣಕ್ಕೆ ಅವಕಾಶ ಮಾಡಿಕೊಟ್ಟ ಕಾಲೇಜು ಪ್ರಾಂಶುಪಾಲರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷದ ಮುಖಂಡರು ಶುಕ್ರವಾರ ಸಭೆ ನಡೆಸಿ ಮುಂದಿನ ಹೋರಾಟಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ, ಪತ್ರಕರ್ತ ಶಶಿಧರ ಹೆಮ್ಮಾಡಿ, ಚಕ್ರವರ್ತಿ ಸೂಲಿಬೆಲೆ ಕಳೆದ ಹದಿನೈದು ವರ್ಷಗಳಿಂದ ಸುಳ್ಳು ಹೇಳುತ್ತಲೇ ಬಂದಿದ್ದಾರೆ. ಸೂಲಿಬೆಲೆ ಎಂದರೆ ಓರ್ವ ದೇಶಭಕ್ತ, ಪ್ರಖರ […]
ಹೊಳೆಯಲ್ಲಿ ಪತ್ತೆಯಾಯಿತು 30 ಕೆ.ಜಿ. ಗಾತ್ರದ ಮೀನು

ಕುಂದಾಪುರ : ಕುಂದಾಪುರ ತಾಲೂಕಿನ ಕೊಡೇರಿಯ ಎಡಮಾವಿನ ಹೊಳೆಯಲ್ಲಿ ಬುಧವಾರ ಸ್ಥಳೀಯ ಮೀನುಗಾರರಾದ ಸುಧೀರ್ ಹಾಗೂ ವಿಶ್ವನಾಥ್ ಸಹೋದರರಿಗೆ ಬೃಹತ್ ಗಾತ್ರದ ಕಾದರ್ (ಅವರ್ಗಿ) ಮೀನು ದೊರೆತಿದೆ. ಈ ಮೀನು ಸುಮಾರು 30 ಕೆಜಿ ಇದೆ. ಆಳ ಸಮುದ್ರಲ್ಲಿ ಇರುವ ಈ ಮೀನು ಹೊಳೆಯಲ್ಲಿ ಸಿಕ್ಕಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ ಸಮಾರೋಪ ಸಮಾರಂಭ

ಕುಂದಾಪುರ: ವಿದ್ಯಾರ್ಥಿಗಳಲ್ಲಿನ ಕಲೆ-ಸಾಹಿತ್ಯದ ಕುರಿತಾದ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವುದೇ ಪ್ರತಿಭಾ ದಿನಾಚರಣೆಯ ಉದ್ದೇಶ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಸ್ಪರ್ಧೆ- ಬಹುಮಾನಕ್ಕೆ ಸೀಮಿತವಾಗಿರಿಸದೆ, ಕಲೆಯಲ್ಲೇ ಬದುಕನ್ನು ಕಟ್ಟಿಕೊಳ್ಳುವಂತಾಗಬೇಕು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತೀರ್ಪುಗಾರರಾದ ಭಂಡಾರ್‍ಕಾರ್ಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ. ಯಶವಂತಿ ಕೆ., ನಾವುಂದ ಸರಕಾರಿ ಪದವಿ […]