ವಂಡ್ಸೆ ಗ್ರಾಮಕ್ಕೆ ಬೇಕಾಗಿದೆ 108 ಅಂಬ್ಯುಲೆನ್ಸ್ ಮತ್ತು ಸಮುದಾಯ ಆರೋಗ್ಯ ಕೇಂದ್ರ
ಕುಂದಾಪುರ: ವಂಡ್ಸೆ ಹೋಬಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇದ್ದರೂ 108 ಅಂಬ್ಯುಲೆನ್ಸ್ ಮತ್ತು ಸಮುದಾಯ ಆರೋಗ್ಯ ಕೇಂದ್ರ ಇಲ್ಲದಿರುವುದು ದುರದೃಷ್ಕಕರ. ವಂಡ್ಸೆ ಹೋಬಳಿ ಗ್ರಾಮ ಆಗಿರುವುದರಿಂದ ಇಲ್ಲಿಗೆ ಒಂದು ಸಮುದಾಯ ಆರೋಗ್ಯ ಕೇಂದ್ರ ಮತ್ತು 108 ಅಂಬ್ಯುಲೆನ್ಸ್ ಸೌಲಭ್ಯ ಅಗತ್ಯವಾಗಿದೆ. ಇಲ್ಲಿನ ಸರಕಾರಿ ಕಛೇರಿ, ಬ್ಯಾಂಕುಗಳು, ಸೊಸೈಟಿಯಂತಹ ನಾನಾ ಕೆಲಸಗಳಿಗೆ ಬೇರೆ ಗ್ರಾಮಗಳಿಂದ ನೂರಕ್ಕೂ ಹೆಚ್ಚು ಜನರು ವ್ಯವಹಾರಕ್ಕಾಗಿ ಪ್ರತಿ ನಿತ್ಯ ಬರುತ್ತಾರೆ. ಹೋಬಳಿಗೊಂದು ಸಮುದಾಯ ಆರೋಗ್ಯ ಕೇಂದ್ರ ಇದ್ದರೆ ಸಾರ್ವಜನಿಕರಿಗೆ ಅನುಕೂಲವಾಗುವುದು.ಇಲ್ಲಿ ಯಾರದ್ದಾದರೂ ಆರೋಗ್ಯ ಹದೆಗೆಟ್ಟರೆ […]
ಹಂಚು ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಸಿಐಟಿಯು ಧ್ವಜಾರೋಹಣ
ಕುಂದಾಪುರ: ಇಲ್ಲಿನ ಹಂಚು ಕಾರ್ಮಿಕರ ಭವನದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ ಶಂಕರ್ ಧ್ವಜಾರೋಹಣ ನೆರವೇರಿಸಿದರು. ಕುಂದಾಪುರದ ಎಲ್ಲಾ ಹತ್ತು ಹಂಚು ಕಾರ್ಖಾನೆಗಳಲ್ಲಿ ಕೆಲಸಕ್ಕೂ ಮುನ್ನ ಕಾರ್ಖಾನೆ ಎದುರುಗಡೆ ಧ್ವಜಾರೋಹಣ ಮಾಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಘೋಷಣೆ ಮೊಳಗಿಸಿದರು. ಸಿಐಟಿಯು ಮುಖಂಡ ಎಚ್ ನರಸಿಂಹ, ಮಹಾಬಲ ವಡೇರಹೋಬಳಿ, ಬಲ್ಕೀಸ್, ರಾಜು ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು. ಬೈಂದೂರು ಸಿಐಟಿಯು ಕಚೇರಿಯಲ್ಲಿ ಸಿಐಟಿಯು ಧ್ವಜಾರೋಹಣ ಶ್ರೀಧರ ಉಪ್ಪುಂದ ನೆರವೇರಿಸಿದರು. ಸಿಐಟಿಯು ಸಂಚಾಲಕ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಹಾಜರಿದ್ದರು.
ಸತತ 5 ನೇ ಬಾರಿ ಶೇ 100 ಫಲಿತಾಂಶ: ಮರುಮೌಲ್ಯಮಾಪನದಲ್ಲಿ ಶ್ರೀವೆಂಕಟರಮಣ ಕಾಲೇಜಿಗೆ ಒಟ್ಟು 13 ರ‍್ಯಾಂಕ್
ಕುಂದಾಪುರ: 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ ಫತಾಂಶ ಬಂದಿದ್ದು, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಸತತ 5 ನೇ ಬಾರಿ ನೂರಕ್ಕೆ ನೂರು ಫಲಿತಾಂಶ ದಾಖಲಿಸಿದೆ. ಮರುಮೌಲ್ಯಮಾಪನದಲ್ಲಿ ವಿಜ್ಞಾನ ವಿಭಾಗದ ಪ್ರಣಮ್ಯ 590 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್, ಇಂಚರ 589 ಅಂಕ ಪಡೆಯುವ ಮೂಲಕ 8ನೇ ರ‍್ಯಾಂಕ್, ಸಂಜನಾ ಶೆಟ್ಟಿ 587 ಅಂಕಗಳನ್ನು ಪಡೆದು 10 ನೇ ರ‍್ಯಾಂಕ್ ಪಡೆದಿರುತ್ತಾಳೆ. ರಾಜ್ಯಮಟ್ಟದಲ್ಲಿ ಒಟ್ಟು 13 ರ‍್ಯಾಂಕುಗಳನ್ನು […]
ಕುಂದಾಪುರ: ಹೊಂಬಾಡಿ- ಮಂಡಾಡಿ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಹೊಂಬಾಡಿ ಮಂಡಾಡಿ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ, ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಸತೀಶ್ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಪ್ರಿತಾ ಕುಲಾಲ್, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿನಿ ನೇಹಾ ಜೆ. ರಾವ್ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ
ಕುಂದಾಪುರ: 2022-2023 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನೇಹಾ ಜೆ. ರಾವ್ ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ, ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು , ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.